


ಉಜಿರೆ: ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆಯಲ್ಲಿ ಜು.30ರಂದು ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಯಿತು.ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಮತ್ತು ಆಲ್ಕಾರ್ಗೋ ಲೋಜಿಸ್ಟಿಕ್ಸ್ ಲಿಮಿಟೆಡ್ ಇದರ ಸಹಭಾಗಿತ್ವದೊಂದಿಗೆ ನಡೆಸಲಾಯಿತು.



ಮನೋವೈದ್ಯರಾದ ಡಾ.ಸುಧಾಕರ ಭಟ್ ಸುಳ್ಯ, ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿ ಶಿಬಿರಾರ್ಥಿಗಳಿಗೆ ಉಚಿತವಾಗಿ ಔಷಧಿಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ಆಶ್ರಮದ ಸಿಬ್ಬಂದಿಯವರಾದ ಪಿ.ಜೆ ಸುಜಾ, ಸೇಸಪ್ಪ, ದೀಪಕ್ ಮತ್ತು ಶ್ರೇಯಸ್ ಶಿಬಿರದಲ್ಲಿ ಉಪಸ್ಥಿತರಿದ್ದರು. 60 ಜನ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.


            





