ಮುಂಡಾಜೆ: ವಿವೇಕಾನಂದ ಮುಂಡಾಜೆ ಶಿಕ್ಷಣ ಸಂಸ್ಥೆಗಳು ಇಲ್ಲಿನ ಹಿರಿಯ ವಿದ್ಯಾರ್ಥಿಗಳ ಸಮಾವೇಶ, ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜು.29ರಂದು ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವೆಂಕಟೇಶ್ವರ ಭಟ್ ಕಜೆ ಇವರು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಾಗಿದ್ದ ಭಾಸ್ಕರ ಗೌಡ ದೇವಸ್ಯ, ಜ್ಞಾನ ರತ್ನ ಶಿಕ್ಷಣ ಮತ್ತು ಚಾರಿಟೇಬಲ್ ಟ್ರಸ್ಟ್ ನಿಡ್ಡೋಡಿ ಕಟೀಲು ಹಾಗೂ ಮುರಳೀಧರ ನಾಯಕ್, ನಿಯಂತ್ರಣ ಅಧಿಕಾರಿಗಳು ಕಂದಾಯ ಮತ್ತು ಕಾನೂನು ಮೆಸ್ಕಾಂ ಮಂಗಳೂರು ಇವರುಗಳು ಆಗಮಿಸಿ, ತಮ್ಮ ಹಿಂದಿನ ನೆನಪುಗಳನ್ನು ಮೆಲುಕು ಹಾಕಿದರು ಮತ್ತು ಸಂಸ್ಥೆಯ ಬೆಳವಣಿಗೆಗೆ ಸರ್ವ ರೀತಿಯ ಪ್ರೋತ್ಸಾಹ ನೀಡುವುದಾಗಿ ಭರವಸೆ ನೀಡಿದರು. ಮುಂಡಾಜೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ವಿನಯಚಂದ್ರ ಕೆ., ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯವರಾದ ಜಯಂತಿ ಟಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯ ವಿದ್ಯಾರ್ಥಿ ಸಂಘದ ದಾನಿಗಳ ಸಹಕಾರದಲ್ಲಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದ ಚಿನ್ನದ ಪದಕ ಗಳಿಸಿರುವ ಕ್ರೀಡಾಪಟುಗಳು, ಶಿಕ್ಷಣದಲ್ಲಿ ಉನ್ನತ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ ಶೇಕಡ 100 ಫಲಿತಾಂಶ ಪಡೆದ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥರು ಮತ್ತು ಕ್ರೀಡಾ ಸಾಧನೆಗೆ ಪ್ರೋತ್ಸಾಹಿಸಿದ ದೈಹಿಕ ಶಿಕ್ಷಕರನ್ನು ಗೌರವಿಸಲಾಯಿತು.
ಹಿರಿಯ ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳು, ಸದಸ್ಯರು,ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಕಾಲೇಜಿನ ಪ್ರಾಂಶುಪಾಲರು, ಶಿಕ್ಷಣ ಸಂಸ್ಥೆಯ ಇತರ ಸಿಬ್ಬಂದಿ ವರ್ಗ, ಹಿರಿಯ ಹಾಗೂ ಕಿರಿಯ ವಿದ್ಯಾರ್ಥಿಗಳು ಭಾಗವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳು ಪ್ರಾರ್ಥಿಸಿ, ಸಂಘದ ಉಪಾಧ್ಯಕ್ಷರಾದ ನಾರಾಯಣ ಫಡಕೆ ಪ್ರಸ್ತಾವನೆ ಯೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಜಯಂತಿ ಇವರು ವರದಿ ಮಂಡಿಸಿದರು. ಜೊತೆ ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ಮತ್ತು ಸದಸ್ಯರಾದ ವಸಂತಿ ಇವರು ನಿರೂಪಿಸಿ, ಮುಖ್ಯ ಶಿಕ್ಷಕಿ ಚಂದ್ರಮತಿ ಇವರು ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.