ಬಳಂಜ: ಜೆ.ಸಿ.ಐ ಬೆಳ್ತಂಗಡಿ ಮಂಜುಶ್ರೀ ಹಾಗೂ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಇವರ ಸಹಯೋಗದಲ್ಲಿ ದಾನ್ ಮತ್ತು ಅಭಿನಂದನಾ ಸಮಾರಂಭ

0

ಬಳಂಜ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಇವರ ಸಹಯೋಗದಲ್ಲಿ ದಾನ್ ಹಾಗೂ ಅಭಿನಂದನಾ ಕಾರ್ಯಕ್ರಮ ದಿನಾಂಕ 30 ರಂದು ಬಳಂಜ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಅಧ್ಯಕ್ಷರಾದ ಪ್ರವೀಣ್ ಕುಮಾರ್ ರವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಅಧ್ಯಕ್ಷರಾದ ಶಂಕರ್ ರಾವ್ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ವಿಜಯವಾಣಿ ಪತ್ರಿಕೆಯ ತಾಲೂಕು ವರದಿಗಾರರಾದ ಮನೋಹರ್ ಬಳಂಜ,ಸುದ್ದಿ ಉದಯ ವಾರಪತ್ರಿಕೆ ವರದಿಗಾರರಾದ ಸಂತೋಷ್ ಪಿ.ಕೋಟ್ಯಾನ್, ಜೆಸಿಐ ಮಂಜುಶ್ರೀಯ ಕಾರ್ಯದರ್ಶಿಗಳಾದ ಸುಧೀರ್,ಕೆ ಎನ್,ಜೂನಿಯರ್ ಜೆಸಿಐ ಅಧ್ಯಕ್ಷ ರಾಮಕೃಷ್ಣ ಶರ್ಮ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಹನ್ನೊಂದು ಮಂದಿ ಬಡ ಕುಟುಂಬದ ಸದಸ್ಯರಿಗೆ ತಲಾ 25 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಯಿತು. ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಎಲ್ಲಾ ಕಾರ್ಯಕ್ರಮದಲ್ಲಿ ಸರ್ವ ರೀತಿಯ ಲ್ಲಿ ಸಹಕಾರವನ್ನು ನೀಡುತ್ತಿರುವ ಶೋಭಾ ಜಿ.ಕೆರೆ ಯವರನ್ನು ಸನ್ಮಾನಿಸಲಾಯಿತು. ಇವರ ಜೊತೆಗೆ ಸಹಕರಿಸುವ ನಳಿನಿ ನಿಟ್ಟಡ್ಕ, ಮೋಹಿನಿ ನಿಟ್ಟಡ್ಕ,ಮೋಹಿನಿ ನಾಲ್ಕೂರು,ಪ್ರಮೀಳಾ ಬಳಂಜ,ಕಲಾವತಿ ಮಜ್ಜೆನಿ ಇವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.


ಕರಾಟೆ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ವಿಜ್ಞಾ ಹಾಗೂ ವಿದ್ಯಾ ಕ್ಷೇತ್ರದಲ್ಲಿ ಅತ್ಯಧಿಕ ಅಂಕ ಗಳಿಸಿದ ಅನುಕ್ಷಾಬಹುಮುಖ ಪ್ರತಿಭೆ ಕು.ಮಾನ್ಯ ರವರನ್ನು ಇದೇ ಸಂದರ್ಭದಲ್ಲಿ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಕೈ ಜೋಡಿಸಿ ಸಹಕಾರ ನೀಡಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಶಂಕರ್ ರಾವ್ ಹಾಗೂ ಕಾರ್ಯದರ್ಶಿ ಸುಧೀರ್ ಕೆ ಎನ್ ಇವರನ್ನು ಅಭಿನಂದಿಸಲಾಯಿತು.ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ ಸದಸ್ಯರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕು.ಮಾನ್ಯ ಪ್ರಾರ್ಥಿಸಿದರು. ಮಂಡಳಿಯ ಸಂಚಾಲಕರಾದ ಹರೀಶ್,ವೈ.ಚಂದ್ರಮ ಸ್ವಾಗತಿಸಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಾನಂದ ಸಾಲಿಯಾನ್ ಬಳಂಜ ಹಾಗೂ ಜಗದೀಶ್ ಬಳಂಜ ಕಾರ್ಯಕ್ರಮ ನಿರೂಪಿಸಿದರು.ಕು.ಜ್ಯೋತಿ ಮಜ್ಜೆನಿ ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here