ಬೆಳ್ತಂಗಡಿ: ರಜಾ ದಿನಗಳಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಕಚೇರಿ ಕೆಲಸ- ರೈತರಿಗೆ ಅಡಿಕೆ ‌ಹಾಗೂ ಕಾಳು ಮೆಣಸು ಬೆಳೆಗಳಿಗೆ ವಿಮೆ ನೋಂದಣಿ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ಅಡಿಕೆ, ಕಾಳು ಮೆಣಸು ಬೆಳೆಗಳಿಗೆ ಹವಾಮಾನ ವೈಪರೀತ್ಯಗಳಿಂದ ರಕ್ಷಣೆ ನೀಡುವ ಸಲುವಾಗಿ ಪ್ರಾರಂಭಿಸಲಾದ ಬೆಳೆ ವಿಮೆ ಯೋಜನೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ತೋಟಗಾರಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಚೇರಿ ರಜಾ ದಿನಗಳಲ್ಲಿ ಜು.29 ಮತ್ತು 30 ರಂದು ಕಚೇರಿಯಲ್ಲಿ ಕೆಲಸ ನಿರ್ವಹಣೆ ಮಾಡಿದರು.

ಈ ಸಂದರ್ಭದಲ್ಲಿ ವಿಮೆ ಮಾಡಿಸುವ ರೈತರು FRUITS ತಂತ್ರಾಂಶದ ನೋಂದಣಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿರುತ್ತದೆ.ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಪಡೆದು ವಿಮೆ ಪಡೆಯಲು ಹೆಚ್ಚಿನ ಪ್ರಮಾಣದಲ್ಲಿ ರೈತರು ತೋಟಗಾರಿಕೆ ರಜಾ ದಿನದ ಪ್ರಯೋಜನ ಪಡೆದರು ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದರು.

p>

LEAVE A REPLY

Please enter your comment!
Please enter your name here