ಪೆರೋಡಿತ್ತಾಯ ಕಟ್ಟೆ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

0

ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಪೆರೋಡಿತ್ತಾಯ ಕಟ್ಟೆ ಇಲ್ಲಿಂದ ವರ್ಗಾವಣೆ ಹೊಂದಿದ ಮೂವರು ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಯವರಿಗೆ ಬೀಳ್ಕೊಡುವ ಸಮಾರಂಭವನ್ನು ನೆರವೇರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ರಘುನಾಥ ,ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಪ್ರಸನ್ನ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮುಖ್ಯ ಶಿಕ್ಷಕಿ ಪದ್ಮಾವತಿ ಇವರು ವರ್ಗಾವಣೆ ಹೊಂದಿದ ಶಿಕ್ಷಕರಿಗೆ ಶುಭಕೋರಿದರು.ಸೇವಾ ಹಿರಿಯ ಶಿಕ್ಷಕಿ ಬೆನೆಡಿಕ್ಟ ಪಾಯ್ಸ್ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕಿ ದೇವಿಕ ಇವರು ವಂದಿಸಿದರು.ಎಲ್ಲಾ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಹಕರಿಸಿದರು.

LEAVE A REPLY

Please enter your comment!
Please enter your name here