ಬೆಳ್ತಂಗಡಿ: ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ, ಕಾನ್ಫರೆನ್ಸಾ ಎಪಿಸ್ಕೋಪಾಲೆ ಇಟಾಲಿಯನಾ ಹಾಗೂ ಭಾರತ್ ಮಾತಾ ಅನುದಾನಿತ ಪ್ರೌಢಶಾಲೆ ಮುದೂರು ಇವುಗಳ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮವು ಮುದೂರು ಭಾರತ್ ಮಾತಾ ಅನುದಾನಿತ ಪ್ರೌಢಶಾಲೆಯಲ್ಲಿ ಆಗಸ್ಟ್ 5 ರಂದು ನಡೆಯಿತು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೊಯಿ ಎ.ಜೆ. ರವರು ವನಮಹೋತ್ಸವದ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು.ಶಾಲಾ ಮುಖ್ಯೋಪಾಧ್ಯಾಯಿನಿ ಸಿ. ಆನಿ ಗ್ರೇಸ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಸಾಂಕೇತಿಕವಾಗಿ ಮಕ್ಕಳಿಗೆ ಗಿಡವನ್ನು ವಿತರಿಸಿ ಹಾಗೂ ಎಲ್ಲಾ ಮಕ್ಕಳು ಸೇರಿ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಉಪಸ್ಥಿತರಿದ್ದರು.ಶಿಕ್ಷಕರಾದ ಚಂದ್ರರವರು ಕಾರ್ಯಕ್ರಮ ಎಲ್ಲರನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶ್ರೀ ಸೇವಿ ವಂದಿಸಿದರು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ವತಿಯಿಂದ ಎಲ್ಲಾ ಮಕ್ಕಳಿಗೂ ಮಾವಿನ ಗಿಡಗಳನ್ನು ಹಾಗೂ ಸಿಹಿತಿಂಡಿ ವಿತರಿಸಲಾಯಿತು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಮಂಗಳೂರು ರೋಶನಿ ನಿಲಯದ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.