ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪಾಲಕರ ಹಬ್ಬ

0

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಆಗಸ್ಟ್ 8 ರಂದು ಶಾಲಾ ಪಾಲಕರ ಹಬ್ಬವನ್ನು ಆಚರಿಸಲಾಯಿತು.ಶಾಲಾ ಪಾಲಕರ ಪ್ರತಿಮೆಗೆ ಭಕ್ತಿಪೂರ್ವಕವಾಗಿ ಮಾಲಾರ್ಪಣೆ ಮಾಡಲಾಯಿತು. ಶಾಲಾ ಸಂಚಾಲಕರಾದ ಅತೀ ವಂ ಫಾ ವಾಲ್ಟರ್ ಡಿಮೆಲ್ಲೋರವರು ಮಕ್ಕಳು ಶಾಲಾ ಕಾರ್ಯಕ್ರಮಗಳಲ್ಲಿ ಆಸಕ್ತಿಯಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕೆಂದು ತಿಳಿಸಿ ಆಶೀರ್ವದಿಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಶಾಲಾ ಪಾಲಕರ ದಿನದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು. ಒಂಭತ್ತು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಿಕೊಟ್ಟರು. ನೃತ್ಯ ಮತ್ತು ರೂಪಕದ ಮೂಲಕ ಎಲ್ಲರ ಮನರಂಜಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ವಾಲ್ಟರ್ ಮೋನಿಸ್ ರವರು ಉಪಸ್ಥಿತರಿದ್ದರು.ವಿದ್ಯಾರ್ಥಿನಿಯರಾದ ಶಿಬಾ ಮರಿಯಮ್ ಮತ್ತು ಸನ ಮರಿಯಮ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು. ಫಾತಿಮಾ ಸ್ವಫಾ ವಂದಿಸಿದರು.ಸಹಶಿಕ್ಷಕಿಯರಾದ ಸರಿತಾ ರೋಡ್ರಿಗಸ್ ಮತ್ತು ಜೊನಿಟಾ ಕೊರೆಯ ಸಹಕರಿಸಿದರು.

LEAVE A REPLY

Please enter your comment!
Please enter your name here