ಬೆಳ್ತಂಗಡಿ: ಪೂರ್ಣ ಬಹುಮತದ ಸರಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದು 3 ತಿಂಗಳಾದರೂ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಎಂದು ಜನ ಸಾಮಾನ್ಯರಲ್ಲಿ ಆಗಿದೆ.ಮಂತ್ರಿಗಳು ಅಧಿಕಾರಿಗಳನ್ನು ನಡೆಸುವ ರೀತಿ, ಅವರಿಗೆ ಕೊಡುವ ಬೆದರಿಕೆ ನ್ಯಾಯಯುತವಾಗಿ ಕೆಲಸ ಮಾಡಲು ಸಾಧ್ಯವಿಲ್ಲದಂತಾಗಿದೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್ ಅವರು ಪ್ರವಾಸಿ ಮಂದಿರದಲ್ಲಿ ಆ.11ರಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಇರುವೈಲು ಗ್ರಾ.ಪಂ ರಾಜೀವ ಗಾಂಧಿ ಸೇವಾ ಕೇಂದ್ರ ಮತ್ತು ಪಂಚಾಯತ್ ಕಛೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರದಂತೆ ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಿಗದಿಪಡಿಸಲಾಗಿತ್ತು.ಆದರೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಕಾರಣ ನೀಡಿ ಗ್ರಾ.ಪಂ ಪಿಡಿಒ ಮತ್ತು ಕಾರ್ಯದರ್ಶಿಯನ್ನು ಅಮಾನತುಗೊಳಿಸಲಾಗಿದೆ.
ದ.ಕ ಜಿಲ್ಲೆಯಲ್ಲಿ ಈ ರೀತಿ ಶಾಸಕರ ಹಕ್ಕಿಗೆ ಚ್ಯುತಿ ತರುವ ಘಟನೆಗಳು ಮೇಲಾಧಿಕಾರಿಗಳ ಮೌಖಿಕ ಆದೇಶ ಮೇರೆ ನಡೆಯುತ್ತಿದ್ದು, ಅಧಿಕಾರಿಗಳ ಈ ರೀತಿಯ ವರ್ತನೆ ಖಂಡನೀಯ.ಆದ್ದುದರಿಂದ ಈಗಾಗಲೇ ಅಮಾನತುಗೊಂಡಿರುವ ಅಧಿಕಾರಿಗಳ ಅಮಾನತು ಆದೇಶ ತಕ್ಷಣ ಹಿಂಪಡೆಯಬೇಕು ಮತ್ತು ಶಾಸಕರ ಹಕ್ಕಿಗೆ ಚ್ಯುತಿ ತರುವ ಕೆಲಸ ಮುಂದಕ್ಕೆ ಮರುಕಳಿಸಬಾರದು ಎಂದು ಎಚ್ಚರಗೊಳಿಸಿದರು.ಆ.14ರ ಒಳಗೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲೆಯ ಎಲ್ಲಾ ಶಾಸಕರು ಪ್ರತಿಭಟನೆ ನಡೆಸಲಿದ್ದೇವೆ ಎಂದರು.
ಗೌತಮ ಎಂಬ ಗುತ್ತಿಗೆದಾರ ತಾನು ಮಾಡಿದ ಕೆಲಸಕ್ಕೆ ಬಿಲ್ಲು ಪಾವತಿ ಸರಕಾರ ಮಾಡಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸರಕಾರ ಬಂದು ಎರಡು ತಿಂಗಳಲ್ಲೇ ಭ್ರಷ್ಟಾಚಾರ, ವರ್ಗಾವಣೆ ಮಿತಿ ಮೀರಿದೆ.ಗುತ್ತಿಗೆದಾರ ಸಂಘ ನ್ಯಾಯಯುತವಾಗಿ ಮಾಡಿದ ಕೆಲಸದ ಬಿಲ್ಲು ಕೇಳುವಾಗ ಕಮಿಷನ್ ಕೇಳುತ್ತಾರೆ ಎಂದು ಆರೋಪ ಮಾಡಿದರು.
ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಏ.ಟಿ.ಎಂ ಆಗಿದೆ.ಎರಡು ತಿಂಗಳಲ್ಲಿ ಭ್ರಷ್ಟಾಚಾರ ಮಾಡಿದ ಸರಕಾರ ಇನ್ನೊಂದಿಲ್ಲ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಭಾ.ಜ.ಪ ಮಂಡಲ ಕಾರ್ಯದರ್ಶಿ ಗಣೇಶ್ ಗೌಡ ನಾವೂರು ಉಪಸ್ಥಿತರಿದ್ದರು.