ಬೆಳ್ತಂಗಡಿ ಹೋಲಿ ರಿಡೀಮರ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

0

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.

ಶಾಲಾ ಸಂಚಾಲಕರಾದ ಅತೀ ವಂ ಫಾ ವಾಲ್ಟರ್ ಡಿಮೆಲ್ಲೋರವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಿ ಶುಭ ಹಾರೈಸಿದರು.ವಿದ್ಯಾರ್ಥಿಗಳು ಶಾಲಾ ವಾದ್ಯ ತಂಡದೊಂದಿಗೆ ಪಥ ಸಂಚಲನದ ಮೂಲಕ ರಾಷ್ಟ್ರ ಧ್ವಜಕ್ಕೆ ಗೌರವ ನಮನ ಸಲ್ಲಿಸಿದರು.ಹಾಗೂ ದೇಶ ಭಕ್ತಿಗೀತೆ ಮತ್ತು ನೃತ್ಯಗಳ ಮೂಲಕ ದೇಶಭಕ್ತಿಯನ್ನು ಸಾರಿದರು.ವಿದ್ಯಾರ್ಥಿ ಮರ್ವಿನ್ ಡಿಸೋಜ ಸ್ವಾತಂತ್ರ್ಯೋತ್ಸವದ ಕುರಿತು ಮಾತನಾಡಿದರು.

ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ವಾಲ್ಟರ್ ಮೋನಿಸ್, ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಚರ್ಚಿನ 21 ಆಯೋಗಗಳ ಸಂಯೋಜಕಿ ಪೌಲಿನ್ ರೇಗೊ, ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಸುಪ್ರಿಯಾ ಡಿಸೋಜ, ಪೋಷಕರು ಹಾಗೂ ದೇಶಾಭಿಮಾನಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಮಾರ್ಗದರ್ಶನ ನೀಡಿದರು.ವಿದ್ಯಾರ್ಥಿಗಳಾದ ಪ್ರೇಕ್ಷಾ ಸ್ವಾಗತಿಸಿ, ದೀಪ್ತಿ ವಂದಿಸಿ, ಯಶಸ್ವಿ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here