ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಾಧವ ಗೌಡ ಓಣಾಜೆ ನೆರವೇರಿಸಿದರು.
ನಂತರ ಶಾಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಊರಿನ ವಿದ್ಯಾಭಿಮಾನಿಗಳಿಂದ ಮೆರವಣಿಗೆ ನಡೆಸಲಾಯಿತು.
ನಂತರ ನಡೆದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಬೆಳಾಲು ಗ್ರಾ.ಪಂ.ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯದ ಕೃಷಿ ವಿಭಾಗದ ಮೇಲ್ವಿಚಾರಕರಾದ ರಮೇಶ್ ಗೌಡ, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಲೋಕೇಶ್ ಓಣಾಜೆ, ಶಾಲಾ ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ಲೇಖಾವತಿ, ಅಂಗನವಾಡಿ ಕಾರ್ಯಕರ್ತೆ ಲೀಲಾ, ದಾನಿಗಳಾದ ದಾಮೋದರ ಪೂಜಾರಿ ಕೆರೆಕೋಡಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ದಾನಿಗಳಾದ ಬೆಳಾಲು ಗ್ರಾ.ಪಂ.ಸದಸ್ಯರಾದ ಜಯಂತ ಗೌಡ ಒಣ್ಯಾಲು ಹಾಗೂ ಬೆಂಗಳೂರು ಪಾನಿಪುರಿ ಸ್ಟಾಲ್ ನ ಮಾಲಕರಾದ ದಾಮೋದರ ಪೂಜಾರಿ ಕೆರೆಕೋಡಿ ಇವರಿಂದ ಶಾಲಾ ಮಕ್ಕಳಿಗೆ ಟೈ,ಬೆಲ್ಟ್ ಹಾಗೂ ಐಡಿ ಕಾರ್ಡ್ ವಿತರಣೆ ಮಾಡಲಾಯಿತು.ಸಭಾಧ್ಯಕ್ಷತೆ ವಹಿಸಿದ್ದ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಾಧವ ಗೌಡ ಓಣಾಜೆ, ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿ, ಶಾಲಾಭಿವೃದ್ದಿಗೆ ಎಲ್ಲರ ಸಹಕಾರ ಕೋರಿದರು.ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಶಾಲಾ ಅತಿಥಿ ಶಿಕ್ಷಕಿ ಹರಿಣಾಕ್ಷಿ ಸ್ವಾಗತಿಸಿದರು. ಗೌರವ ಶಿಕ್ಷಕರಾದ ಕರಿಯಣ್ಣ ಗೌಡ ನಿರೂಪಿಸಿ, ಬೇರಿಕೆ ಅಂಗನವಾಡಿ ಕಾರ್ಯಕರ್ತೆ ಮಾಧವಿ ವಂದಿಸಿದರು.ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಸಿಹಿ ತಿಂಡಿ ಹಾಗೂ ಸಿಹಿ ಭೋಜನ ದೊಂದಿಗೆ ಸಮಾರಂಭ ಸಮಾಪನಗೊಂಡಿತು.