ಗುರುವಾಯನಕೆರೆ: 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿ ಸಾಧನೆ ಮಾಡಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುರುವಾಯನಕೆರೆ ಇಲ್ಲಿಗೆ ಇಂದು ನಡೆದ ಮಹಾಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.
ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಗುರುವಾಯನಕೆರೆ ಸಿಎ ಬ್ಯಾಂಕಿನ ಅಧ್ಯಕ್ಷ ಭಗೀರಥ ಜಿ. ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಕಲ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ಗುರುವಾಯನಕೆರೆ ಸಿಎ ಬ್ಯಾಂಕಿನ ನಿರ್ದೇಶಕರುಗಳು, ಇತರರು ಉಪಸ್ಥಿತರಿದ್ದರು.
p>