


ಮೇಲಂತಬೆಟ್ಟು: ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಶಿಕ್ಷೆ ಆಗಬೇಕು ಮತ್ತು ಹಿಂದೂಗಳ ಧಾರ್ಮಿಕ ಶ್ರದ್ಧಾಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು ಪೂಜ್ಯ ಖಾವಂದರ ಬಗ್ಗೆ ಅವಹೇಳನ ಮಾಡದಂತೆ ಅವರಿಗೆ ಒಳ್ಳೆಯ ಬುದ್ದಿಯನ್ನು ಕೊಡಲಿ ಎಂದು ಪೂಜೆ ಮಾಡಿ ಪ್ರಾರ್ಥನೆ ಮಾಡಲಾಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಜಯಣ್ಣ, ಒಕ್ಕೂಟ ಪದಾಧಿಕಾರಿಗಳು ತಿಮ್ಮಪ್ಪ, ದೇವಸ್ಥಾನದ ಪ್ರದಾನ ಅರ್ಚಕರು ಯೋಗೀಶ್, ಒಕ್ಕೂಟ ಪದಾಧಿಕಾರಿಗಳು, ಗಣ್ಯರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.










