ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆ.18 ರಂದು ನಡೆಯಿತು.
ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಕುಮಾರ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಮುಖ್ಯ ಅಥಿತಿಗಳಾದ ಎಸ್ ಡಿ ಎಂ ಪದವಿ ಕಾಲೇಜಿನ ಉಪನ್ಯಾಸಕರಾದ ಹಾಗೂ ಮಾಜಿ ಎನ್ .ಎಸ್. ಎಸ್ ನ ಯೋಜನಾಧಿಕಾರಿಯಾದ ಡಾ.ಲಕ್ಷ್ಮಿಪ್ರಸಾದ್ ರವರು ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ, ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯದ ಬಗ್ಗೆ ಉತ್ತಮ ಸಂದೇಶವನ್ನು ನೀಡಿದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಯಾದ ಪ್ರಕಾಶ್ ರವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.ಇದರ ಜೊತೆ ಉಪ ಯೋಜನಾಧಿಕಾರಿಯಾದ ಲೋಹಿತ್ ಹಾಗೂ ಪುಷ್ಪಲತಾರವರು ಕೂಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಹಾಗೂ ಎನ್ ಎಸ್ ಎಸ್ ವಿಧಾರ್ಥಿ ನಾಯಕ ಚಾಪು ಚಿರಂತ್ ಹಾಗೂ ವಿಧಾರ್ಥಿ ನಾಯಕಿ ಅರ್ಚನಾ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಮತ್ತು ಎನ್ ಎಸ್ ಎಸ್ ನ ವಿದ್ಯಾರ್ಥಿಗಳು ಪಾಲ್ಗೊಂಡರು.