ಉಜಿರೆ: ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಲಾಯಿತು.
ಆಸ್ಪತ್ರೆಯ ನಿರ್ದೇಶಕ ಎಂ.ಜನಾರ್ದನ್, ವೈದ್ಯಾಧಿಕಾರಿ ಡಾ. ದೇವೇಂದ್ರ ಕುಮಾರ್.ಪಿ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗು ಇತರರು ಭಾಗವಹಿಸಿದ್ದರು.
ರೋಗಿಗಳು ಶೀಘ್ರವಾಗಿ ಗುಣಮುಖರಾಗಿ ಆರೋಗ್ಯದಿಂದ ಜೀವನ ನಡೆಸುವಂತಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
p>