ಬೆಳ್ತಂಗಡಿ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮಂಗಳೂರು ಇದರ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಮತ್ತು ನೂತನ ಲಿಫ್ಟ್ ಉದ್ಘಾಟನೆ

0

ಬೆಳ್ತಂಗಡಿ : ಬೆಳ್ತಂಗಡಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮಂಗಳೂರು ಇದರ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಮತ್ತು ನೂತನ ಲಿಫ್ಟ್ ಆ.27ರಂದು ಉದ್ಘಾಟನೆಗೊಂಡಿತು. ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ವಹಿಸಿದ್ದರು. ಹೊಸ ಎಟಿಎಂನ್ನು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ನೂತನ ಲಿಫ್ಟ್ ನ್ನು ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಉದ್ಘಾಟನೆ ಮಾಡಿದರು.

ಸಹಕಾರಿ ಸಂಘದ ಪಿತಾಮಹ ಮೊಳಹಳ್ಳಿ ಶಿವರಾವ್‌ರಿಂದ 1914 ರಲ್ಲಿ ಪುತ್ತೂರಿನಲ್ಲಿ ಪ್ರಾರಂಭವಾದ ಎಸ್.ಡಿ.ಸಿ.ಸಿ ಬ್ಯಾಂಕ್ 1994 ರಿಂದ ಸತತವಾಗಿ ಡಾ|ಎಂ.ಎನ್. ರಾಜೇಂದ್ರ ಕುಮಾರ್ ರವರ ನಾಯಕತ್ವದಲ್ಲಿ ಸಾಧನೆಯ ಮಹಾಪೂರವನ್ನು ಹೊತ್ತುಕೊಂಡು ಸಹಕಾರ ಕ್ಷೇತ್ರಕ್ಕೆ ಆದರ್ಶವಾಗಿ ಬೆಳೆದು ನಿಂತಿದೆ. ಅನೇಕ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸಿ ಅಭಿವೃದ್ಧಿಯ ಮುಂಚೂಣಿಯಲ್ಲಿದೆ. ಆಧುನಿಕ ಬ್ಯಾಂಕಿಂಗ್ ಸೇವೆಯಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿದೆ.

ಬ್ಯಾಂಕ್‌ ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಜನಮನ್ನಣೆಗಳಿಸಿದೆ. ಹಲವಾರು ರಚನಾತ್ಮಕ ಚಟುವಟಿಕೆಗಳೊಂದಿಗೆ ಸಹಕಾರಿ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಜನಸ್ನೇಹಿ ಬ್ಯಾಂಕ್ ಆಗಿದೆ.

ಶತಮಾನದಷ್ಟು ಸುದೀರ್ಘ ಇತಿಹಾಸವನ್ನು ಇಟ್ಟುಕೊಂಡಿರುವ ಬ್ಯಾಂಕ್ ಸಹಕಾರಿ ರಂಗದಲ್ಲಿ ವಿಶಿಷ್ಟ ನೂತನ ಬ್ಯಾಂಕಿಂಗ್‌ ಸೇವೆಯನ್ನು ನಗರ ಹಾಗೂ ಗ್ರಾಮೀಣ ಜನರಿಗೆ ತನ್ನ ಶಾಖೆಗಳ ಮೂಲಕ ನೀಡುತ್ತಿರುವ ಬ್ಯಾಂಕ್‌ ಜನಸಮಾನ್ಯರ ಬ್ಯಾಂಕ್‌ ಆಗಿ ಗುರುತಿಸಿರುವುದು ವಿಶೇಷ.ಸುದೀರ್ಘ ಕಾಲ ಸಾರ್ವಜನಿಕ ಸೇವೆಯಲ್ಲಿದೆ.ವರದಿ ವರ್ಷದಲ್ಲಿ ಸ್ಪರ್ಧಾತ್ಮಕ ಆರ್ಥಿಕ ಹಿನ್ನೆಲೆಯಲ್ಲಿಯೂ ಎಲ್ಲಾ ವ್ಯವಹಾರದಲ್ಲಿ ಗುರಿಮೀರಿದ ಸಾಧನೆ ಮಾಡಿದೆ.

ಎಲ್ಲಾ ಕೃಷಿ ಸಾಲಗಳು 100 ಶೇಕಡಾ ಮೂಲಾತಿ ಕಂಡಿವೆ ಇದು ರಾಷ್ಟ್ರೀಯ ದಾಖಲೆಯಾಗಿದೆ.19 ಬಾರಿ ಆಪೆಕ್ಸ್‌ ಪ್ರಶಸ್ತಿ, 17 ಬಾರಿ ನಬಾರ್ಡ್ ಪ್ರಶಸ್ತಿ ಬ್ಯಾಂಕಿಗೆ ದೊರೆತಿದೆ. ಎಫ್.ಸಿ.ಬಿ.ಎ ರಾಷ್ಟ್ರೀಯ ಪ್ರಶಸ್ತಿಯಿಂದ ಬ್ಯಾಂಕ್ ಪುರಸ್ಕೃತಗೊಂಡಿದೆ. ರೈತರಿಗೆ ಕಿಸಾನ್ ಕ್ರೆಡಿಟ್ ಸೌಲಭ್ಯ, ಬ್ಯಾಂಕಿನ ಎಲ್ಲಾ ಶಾಖೆಗಳು ಕೋರ್ ಬ್ಯಾಂಕಿಂಗ್, ಇಂಟನೆಟ್ ಸೌಲಭ್ಯ ಇಂತಹ ಉತ್ಕೃಷ್ಟ ಸೇವೆಯನ್ನು ಗ್ರಾಹಕರಿಗೆ ನೀಡುತ್ತಿದೆ.

ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕ್‌ ಎನ್ನುವ ಆಶಯದೊಂದಿಗೆ ಮೊಬೈಲ್ ಬ್ಯಾಂಕಿಂಗ್ ಕಾರ್ಯರೂಪಕ್ಕೆ ತಂದ ದೇಶದ ಮೊದಲ ಬ್ಯಾಂಕ್ ಇದು ಕಾಮನ್ ಸಾಪ್ಟವೇರ್, ಎಟಿಎಂ ರಾಜ್ಯದಲ್ಲಿ ಪ್ರಥಮ ಬಾರಿಗೆ ತಂದ ಹೆಗ್ಗಳಿಕೆ ಪಾತ್ರವಾಗಿದೆ.ಸ್ವಸಹಾಯ ಗುಂಪುಗಳ ಸಮರ್ಪಕ ಅನುಷ್ಠಾನದಲ್ಲಿ ಬ್ಯಾ೦ಕಿಗೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಈಗ ಬೆಳ್ತಂಗಡಿಯಲ್ಲಿ ಪಾಖೆಯಲ್ಲಿ ಎಟಿಎಂ ಸೌಲಭ್ಯದೊಂದಿಗೆ ಎಲ್ಲಾ ವ್ಯವಸ್ಥೆಯನ್ನು ಒಳಗೊಳ್ಳಲಿದೆ.ಪ್ರಸ್ತುತ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಕೋಡಿಯಾಲ್ ಬೈಲ್, ಬಿಸಿರೋಡ್, ಕಂಕನಾಡಿ, ಬೆಳುವಾಯಿ, ಮಣಿಪಾಲ್, ಉಡುಪಿ, ಮಂಗಳೂರು ಮೊಬೈಲ್‌ ಬ್ಯಾಂಕ್, ಉಡುಪಿ ಮೊಬೈಲ್ ಬ್ಯಾಂಕ್, ಸಿದ್ಧಾಪುರ, ಪುತ್ತೂರು ಈಗ 11 ನೇ ಎಟಿಎಂ ಆಗಿ ಬೆಳ್ತಂಗಡಿಯಲ್ಲಿ ಕಾರ್ಯ ಪ್ರಾರಂಭಗೊಂಡಿದೆ. ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಬಿ.ನಿರಂಜನ್ ಭಾವಂತಬೆಟ್ಟು, ಜಯರಾಮ್ ರೈ, ಹರೀಶ್ ಕುಮಾರ್, ಶಶಿಕುಮಾರ್ ರೈ , ಕೇಂದ್ರ ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಪ್ರಭಾರ ) ಗೋಪಾಲಕೃಷ್ಣ ಭಟ್ ಕೆ, ಶಾಖೆಯ ಪ್ರಬಂಧಕ ಸುಧೀರ್, ಉಪಸ್ಥಿತರಿದ್ದರು. ನಿರ್ದೇಶಕ ಶಶಿಕುಮಾರ್ ರೈ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.

ಸುಲ್ಕೇರಿ ಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನಿತ್ಯಾನಂದ ಶೆಟ್ಟಿ ನೊಚ್ಚ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಸಹಕಾರಿಯ ಅಧ್ಯಕ್ಷರು, ಉಪಾಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ನಿರ್ದೇಶಕರು, ಬ್ಯಾಂಕ್ ಸಿಬಂದಿಗಳು, ನವೋದಯ ಸ್ವಸಹಯ ಸಂಘದ ಸದಸ್ಯರು, ಗಣ್ಯರು ಭಾಗವಹಿಸಿದ್ದರು.

p>

LEAVE A REPLY

Please enter your comment!
Please enter your name here