ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವತಿಯಿಂದ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಆ.30 ರಂದು ಚಾಲನೆ ನೀಡಿದರು.
ಮೈಸೂರಿನಲ್ಲಿ ಸಂಸದ ರಾಹುಲ್ ಗಾಂಧಿ, ಎ.ಐ.ಸಿ.ಸಿ.ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎ.ಐ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಸುರ್ಜೇ ವಾಲಾ ರವರ ಗಣ್ಯ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಸರಕಾರದ ಹಲವಾರು ಸಚಿವರ, ಅಧಿಕಾರಿಗಳ ಸಮುಖದಲ್ಲಿ ಉದ್ಘಾಟನೆಗೊಂಡಿತು.ಈ ಕಾರ್ಯಕ್ರಮದ ನೇರ ಪ್ರಸಾರವನ್ನು ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಾಮಸ್ಥರು ವೀಕ್ಷಣೆ ಮಾಡಿದರು.
ಹಾಗೂ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ವಿತರಣೆ ಮಾಡಿದರು.ಕಳಿಯ ಗ್ರಾಮ ಪಂಚಾಯತು ಅಧ್ಯಕ್ಷ ದಿವಾಕರ ಮೆದಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಉಪಾದ್ಯಕ್ಷೆ ಇಂದಿರಾ, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಷಿಣಿ, ಕುಸುಮ.ಎನ್ ಬಂಗೇರ, ಸುಧಾಕರ ಮಜಲು, ಅಬ್ದುಲ್ ಕರೀಮ್ ಕೆ.ಎಮ್., ಮೋಹಿನಿ, ಲತೀಫ್ ಪರಿಮ, ಹರೀಶ್ ಕುಮಾರ್ ಬಿ, ಮರೀಟಾ ಪಿಂಟೋ, ಪುಷ್ಪಾ, ಶ್ವೇತಾ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಫಲಾನುಭವಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಸಿಬ್ಬಂದಿಗಳಾದ ಸುಚಿತ್ರಾ, ಶಶಿಕಲಾ, ನಂದಿನಿ, ರವಿ ಎಚ್, ಸುರೇಶ್ ಗೌಡ ಸಹಕರಿಸಿದರು.