ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಗುರು ಜಯಂತಿ ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ಸಮಾರಂಭ ಆ.31 ರಂದು ಸಂಘದ ಸಭಾ ಭವನದಲ್ಲಿ ಜರಗಿತು.
ಕಾರ್ಯಕ್ರಮವನ್ನು ಸಂಘದ ಗೌರವ ಅಧ್ಯಕ್ಷ ಮಾಜಿ ಶಾಸಕ ಕೆ.ವಸಂತ ಬಂಗೇರ ಉದ್ಘಾಟಿಸಿದರು.ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ವಹಿಸಿದ್ದರು.ಪ್ರಧಾನ ಭಾಷಣಗಾರರಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಪದ್ಮರಾಜ್ ಆರ್. ಭಾಗವಹಿಸಿದ್ದರು.
ವೇದಿಕೆಯಲ್ಲಿ ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ,ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಹೆಚ್., ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಜಿತಾ ವಿ.ಬಂಗೇರ, ಸಂಘದ ಉಪಾಧ್ಯಕ್ಷ ಶೇಖರ ಬಂಗೇರ, ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್ ಕಲ್ಲಾಪ್, ಜೊತೆ ಕಾರ್ಯದರ್ಶಿ ರಾಜೀವ್ ಸಾಲಿಯಾನ್ ಉಪಸ್ಥಿತರಿದ್ದರು.
ಸಾಧಕ ಪ್ರಶಸ್ತಿ ಪುರಸ್ಕಾರಗೊಂಡ ಡಾ.ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ವಿಜೇತ ಖ್ಯಾತ ಮೂತ್ರಪಿಂಡ ತಜ್ಞ ಡಾ.ಸದಾನಂದ ಪೂಜಾರಿ, ದೈಹಿಕ ಶಿಕ್ಷಕ ಪ್ರಶಾಂತ್, ಲೋಕೋಪಯೋಗಿ ಇಲಾಖೆಯ ಕಿರಿಯ ಅಭಿಯಂತರ ಸೂರಜ್ ಹೆಚ್., ಸಿಎ.ಪರೀಕ್ಷೆ ಉತ್ತಿರ್ಣರಾದ ಕು.ನಿರೀಕ್ಷಾ ನಾವರ, ರಾಷ್ಟ್ರ ಮಟ್ಟದ ಡಿಸ್ಕಸ್ ತ್ರೋ ಆಟಗಾರ್ತಿ ಸುಷ್ಮಾ ಪೂಜಾರಿ ಇವರನ್ನು ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಲಾಯಿತು.ಸಂಘದ ಮಾಜಿ ಅಧ್ಯಕ್ಷರುಗಳು, ಮಾಜಿ ನಿರ್ದೇಶಕರು, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳು, ಗ್ರಾಮ ಸಮಿತಿಯ ಪದಾಧಿಕಾರಿಗಳು, ಸಮಾಜ ಭಾಂದವರು ಹಾಜರಿದ್ದರು.ಕಾರ್ಯಕ್ರಮದ ಮೊದಲು ಗುರುಪೂಜೆ, ಭಜನೆ ನಡೆಯಿತು.