ಹೆಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಯಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸಾನಿಧ್ಯದಲ್ಲಿ ಉರುಳು ಸೇವೆ

0

ಧರ್ಮಸ್ಥಳ: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಅವರ ಅಭಿಮಾನಿಯೊಬ್ಬರು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸಾನಿಧ್ಯದಲ್ಲಿ ಉರುಳು ಸೇವೆ ಮಾಡಿ ಗಮನ ಸೆಳೆದಿದ್ದಾರೆ.

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ಶರಣಪ್ಪ ಪರೇಪ್ಪ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿದ ಅಭಿಮಾನಿಯಾಗಿದ್ದಾರೆ.

ಕಳೆದ ಎರಡು ದಿನಗಳಿಂದ ದಿಢೀರನೆ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಬೇಗ ಚೇತರಿಕೆ ಕಂಡು ಮತ್ತೆ ಎಂದಿನಂತೆ ಜನ ಸೇವೆಯಲ್ಲಿ ತೊಡಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ನಂತರ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here