ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

0

ಮಡಂತ್ಯಾರು: ಸರಕಾರಿ ಪ್ರೌಢಶಾಲೆ, ಮಚ್ಚಿನದಲ್ಲಿ ನಡೆದ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವೈಯಕ್ತಿಕ ವಿಭಾಗದಲ್ಲಿ 9ನೇ ತರಗತಿಯ ಜೋಷ್ಮ ಜೋಯಿಸ್ ಮತ್ತು 9ನೇ ತರಗತಿಯ ಸಿಂಚನರವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.ಹಾಗೂ ಸಾಮೂಹಿಕ ಜನಪದ ನೃತ್ಯದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುವ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here