ಮುಂಡಾಜೆ: ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿನ 2023-24 ನೇ ಸಾಲಿನ ಪೋಷಕರ ಮಹಾಸಭೆಯು ಸೆ.1ರಂದು ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ರಿ.ಇದರ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಅವರು ಮಾತನಾಡಿ “ಭಾರತದ ಮಣ್ಣಿನ ಗುಣ, ಸಂಸ್ಕೃತಿ, ಸಂಸ್ಕಾರ, ಆಚಾರ ವಿಚಾರಗಳನ್ನು ರೂಢಿಸಿಕೊಳ್ಳಲು ವಿವೇಕಾನಂದ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಪ್ರೇರೇಪಿಸುತ್ತಿವೆ ಎಂದು ಹೇಳಿದರು.
ಪ್ರಾಂಶುಪಾಲೆ ಜಾಲಿ ಓ ಎ ಕಾಲೇಜಿನ ಹಾಗೂ ಶಿಕ್ಷಣ ಇಲಾಖೆಯ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದರು.ಮನಶಾಸ್ತ್ರ ಉಪನ್ಯಾಸಕಿ ನಮಿತಾ.ಕೆ.ಆರ್ ಪ್ರತಿಭಾ ಪುರಸ್ಕಾರದ ಪಟ್ಟಿ ನೀಡಿದರು.
ಇಂಗ್ಲೀಷ್ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಕಾಲೇಜಿನ ಚಟುವಟಿಕೆಗಳ ವರದಿ ವಾಚಿಸಿದರು.ಶಿಕ್ಷಕ ರಕ್ಷಕ ಸಂಘಕ್ಕೆ ಆಯ್ಕೆಯಾದ ಹೊಸ ಪ್ರತಿನಿಧಿಗಳನ್ನು ಅಭಿನಂದಿಸಲಾಯಿತು.
ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯ ಚಂದ್ರ, ಕಾರ್ಯದರ್ಶಿ ನಾರಾಯಣಗೌಡ ಕೊಳಂಬೆ, ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷ ಸುಂದರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಸ್ವಾಗತಿಸಿದರು.ವಾಣಿಜ್ಯಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿ.ಕೆ ವಂದಿಸಿದರು.ಕನ್ನಡ ಉಪನ್ಯಾಸಕಿ ವಸಂತಿ ಕಾರ್ಯಕ್ರಮ ನಿರೂಪಿಸಿದರು.