ಸೌಜನ್ಯ ಪ್ರಕರಣದ ತನಿಖೆಗೆ ನ್ಯಾಯಾಲಯದ ಸುಪರ್ದಿಯಲ್ಲಿ ವಿಶೇಷ ತನಿಖಾ ದಳ ರಚಿಸಲು ಆಗ್ರಹ- ಪ್ರಜಾಪ್ರಭುತ್ವ ವೇದಿಕೆ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ‌ ಬೃಹತ್ ಪ್ರತಿಭಟನೆ- ಬೆಳ್ತಂಗಡಿ ತಾಲೂಕು ಆಡಳಿತ‌ ಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸಭೆಯಲ್ಲಿ‌ ಕಿಕ್ಕಿರಿದು ಸೇರಿದ ಜನಸ್ತೋಮ

0

ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳದ ಮಣ್ಣಸಂಕದಲ್ಲಿ ಅತ್ಯಾಚಾರಕ್ಕೀಡಾಗಿ‌ ಕೊಲೆಯಾಗಿರುವ ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ಕು.‌ಸೌಜನ್ಯ ಪ್ರಕರಣದ ತನಿಖೆಗೆ ನ್ಯಾಯಾಲಯದ ಸುಪರ್ದಿಯಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಒತ್ತಾಯಿಸಿ ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ‌ ನೇತೃತ್ವದಲ್ಲಿ ಸೆ.3ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಸಾವಿರಾರು ಮಂದಿ‌ ಕಿಕ್ಕಿರಿದು ಕಾರ್ಯಕ್ರಮದಲ್ಲಿ‌ ಪಾಲ್ಗೊಂಡಿದ್ದು ಹಲವೆಡೆ ಎಲ್.ಇ.ಡಿ ಪರದೆ ಅಳವಡಿಸಲಾಗಿದೆ‌. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.


ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸಭೆಯಲ್ಲಿ‌ ಸೌಜನ್ಯ
ಅತ್ಯಾಚಾರ ಮತ್ತು ಕೊಲೆ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು ಹಾಗೂ ಆರೋಪಿಗಳನ್ನು ರಕ್ಷಣೆ ಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಲಾಗಿದೆ.


ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಕು.ಸೌಜನ್ಯರ ತಾಯಿ ಕುಸುಮಾವತಿ ಚಂದಪ್ಪ ಗೌಡ ಪಾಂಗಳ, ಶ್ರೀರಾಮಸೇನೆ ನಾಯಕ ಪ್ರಮೋದ್ ಮುತಾಲಿಕ್, ಸಾಮಾಜಿಕ ಹೋರಾಟಗಾರ ಗೀರಿಶ್ ಮಟ್ಟಣ್ಣನವರ್,ಮಾನವ ಹಕ್ಕುಗಳ ಆಯೋಗದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಗೀತಾ, ನ್ಯಾಯವಾದಿ ಮೋಹಿತ್ ಕುಮಾರ್ ಪುತ್ತೂರು, ಮಹಿಳಾ ಹೋರಾಟಗಾರ್ತಿ ಪ್ರಸನ್ನರವಿ, ತುಳು ಸಂಸ್ಕೃತಿಯ ಚಿಂತಕ ತಮ್ಮಣ್ಣ ಶೆಟ್ಟಿ, ಒಡನಾಡಿ ಸಂಸ್ಥೆಯ ಪರುಶುರಾಮ್, ಸೌಜನ್ಯ ಪ್ರಕರಣದಲ್ಲಿ ನಿರಪರಾಧಿ ಎಂದು ಸಿಬಿಐ ನ್ಯಾಯಾಲಯದಿಂದ ಘೋಷಿಸಲ್ಪಟ್ಟಿರುವ ಕಾರ್ಕಳದ ಸಂತೋಷ್ ರಾವ್ ಸಹೋದರ ಸಂಜಯ್ ರಾವ್ ಮತ್ತಿತರರು ವೇದಿಕೆಯಲ್ಲಿ‌ ಉಪಸ್ಥಿತರಿದ್ದಾರೆ.‌


ಆನಂದ ಕುಲಾಲ್ ಎರ್ಡತ್ತೂರು‌ ಮತ್ತು ಅನಿಲ್ ಅಂತರ ಕಾರ್ಯಕ್ರಮ ನಿರೂಪಿಸಿದರು.

p>

LEAVE A REPLY

Please enter your comment!
Please enter your name here