ಬೆಳ್ತಂಗಡಿ: ಶಿಕ್ಷಕರ ದಿನಾಚರಣೆ ಸಮಿತಿ ಬೆಳ್ತಂಗಡಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮ ದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ ಸೆ.5 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಬಿ.ಕುಸುಮಾಧರ್ ವಹಿಸಿದ್ದರು.ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್.ವಿರೂಪಾಕ್ಷಪ್ಪ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಪ್ರಧಾನ ಭಾಷಣಗಾರರಾಗಿ ಉಜಿರೆ ಶ್ರೀ ಧ.ಮ.ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ.ಎ.ಜಯಕುಮಾರ್ ಶೆಟ್ಟಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಅಕ್ಷರ ದಾಸೋಹ ಇಲಾಖೆಯ ಸಹಾಯಕ ನಿರ್ದೇಶಕಿ ತಾರಕೇಸರಿ, ಸಿಡಿಪಿಓ ಪ್ರಿಯಾ ಅಗ್ನಸ್,ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಯರಾಜ್ ಜೈನ್, ಸಮನ್ವಯಾಧಿಕಾರಿ ಮೋಹನ್ ಕುಮಾರ್, ಕರ್ನಾಟಕ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್, ಪ್ರಾಥಮಿಕ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಡ್ವರ್ಡ್ ಡಿಸೋಜಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ್ ತುಳಪುಲೆ, ಉಪಾಧ್ಯಕ್ಷ ಗೋಪಾಲಕೃಷ್ಣ ತುಳಪುಲೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಾನಂದ ರಾವ್, ಪ್ರಾಥಮಿಕ ಶಿಕ್ಷಕರ ಪ್ರತಿನಿಧಿ ಶಿವಶಂಕರ, ಯೋಗೀಶ್ ಉಪಸ್ಥಿತರಿದ್ದರು.
ಸಮಾರಂಭದಲ್ಲಿ 2021-22 ರ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಶಿಕ್ಷಕ ಎಡ್ವರ್ಡ್ ಡಿ ಸೋಜಾ, 2022-23 ನೇ ಸಾಲಿನ ದ.ಕ.ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ರಾಮಚಂದ್ರ ದೊಡ್ಡಮನಿ ಕೊಯ್ಯುರು, ರವೀಂದ್ರ ಡಿ.ಎನ್.ಗುತ್ಯಡ್ಕ, ಬಿ.ಎಸ್. ಬಿರಾದಾರ್ ನೆಕ್ಕಿಲು ಇವರಿಗೆ ಸನ್ಮಾನ ಮತ್ತು ಈ ವರ್ಷ ನಿವೃತ್ತರಾದ 25 ಶಿಕ್ಷಕರನ್ನು ಸನ್ಮಾನಿಸಲಾಯಿತು.