ಬೆಳ್ತಂಗಡಿ: ಜೀವನದಲ್ಲಿ ಎದುರಾಗುವ ಎಲ್ಲಾ ಸ್ಪರ್ಧೆಗಳನ್ನು ಮನಪೂರ್ವಕವಾಗಿ ಎದುರಿಸಿದಾಗ ಯಶಸ್ಸು ಸಾಧ್ಯವಾಗುವುದು ಎಂದು ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಕೃಷ್ಣಪ್ಪ ಗೌಡ ದೇವಸ್ಯ ಹೇಳಿದರು. ವಾಣಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡುತ್ತಾ, ಕ್ರೀಡಾಳುಗಳು ಕ್ರೀಡಾ ಸ್ಫೂರ್ತಿಯನ್ನು ಮೈಗೂಡಿಸಿಕೊಳ್ಳಬೇಕು.
ಸೋಲು ಗೆಲುವುಗಳ ಬಗ್ಗೆ ಚಿಂತೆ ಮಾಡದೇ ಶ್ರಮವಹಿಸಿ ಸ್ಪರ್ಧೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪಿ.ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ, ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ, ವಾಣಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ ಉಪಸ್ಥಿತರಿದ್ದರು.ಕ್ರೀಡಾ ಸಂಯೋಜಕ ನಂದಕುಮಾರ್ ಸ್ವಾಗತಿಸಿ, ಉಪನ್ಯಾಸಕ ಶಂಕರ ರಾವ್ ಬಿ. ವಂದಿಸಿ, ಸುಧೀರ್ ಕೆ.ಎನ್ ಕಾರ್ಯಕ್ರಮ ನಿರೂಪಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ತ್ರಿವಿಕ್ರಮ ಹೆಬ್ಬಾರ್, ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ ಉಪಸ್ಥಿತರಿದ್ದರು.ಹುಡುಗರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಪ್ರಥಮ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ
ಹುಡುಗಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಪ್ರಥಮ ಹಾಗೂ ಎಸ್.ಡಿ.ಯಂ. ಪದವಿ ಪೂರ್ವ ಕಾಲೇಜು ಉಜಿರೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.