ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಗುರು ನಮನ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

0

ಗುರುವಾಯನಕೆರೆ : ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಕಾರ್ಯಕ್ರಮ ಹಾಗೂ 272 ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕ ಶಿಕ್ಷಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಸೆ.10 ರಂದು ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ನಡೆಯಿತು.

ತುಳುನಾಡಿನ ಸಂಸ್ಕೃತಿಯ ಆಧಾರವಾದ ಪಲ್ಲಕ್ಕಿಯಲ್ಲಿ ಮೂಲಕ ಡಾ.ಸರ್ವಪಲ್ಲಿ ರಾಧಾಕೃಷ್ಣರ ಭಾವ ಚಿತ್ರವನ್ನು ಇರಿಸಿ ವಿದ್ಯಾರ್ಥಿಗಳು ಹೊತ್ತುಕೊಂಡು ಬರುವ ದೃಶ್ಯ ಆಕರ್ಷಣೆಯಾಗಿತ್ತು.ನರಸಿಂಹರಾಜಪುರದ ಬಸ್ತಿಮಠದ ಶ್ರೀಕ್ಷೇತ್ರ ಸಿಂಹನಗದ್ದೆಯ ಪರಮಪೂಜ್ಯ ಸ್ವಸ್ತಿಶ್ರೀ ಶ್ರೀಮದ್ ಅಭಿನವ ಲಕ್ಷ್ಮೀಸೇನಾ ಭಟ್ಟಾರಕ ಸ್ವಾಮೀಜಿಯವರು ಸಾಂಕೇತಿಕವಾಗಿ ಶಿಕ್ಷಕರನ್ನು ಸನ್ಮಾನಿಸಿದರು.

ಎಕ್ಸೆಲ್ ಕಾಲೇಜಿನ ಕೈಪಿಡಿ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ,ಆಶೀರ್ವಚನ ನೀಡಿದರು.

ಕರ್ನಾಟಕ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ ಅರುಣ್ ಪುರ್ಟಾಡೋ ದೀಪ ಪ್ರಜ್ವಲಿಸಿದರು.

ಎಕ್ಸೆಲ್ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಅಧ್ಯಕ್ಷತೆ ವಹಿಸಿದ್ದರು.

ಮಾಜಿ ವಿಧಾನ ಪರಿಷತ್ ಸದಸ್ಯಗಣೇಶ್ ಕಾರ್ಣಿಕ್, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಭಾರತಿ ಎಸ್ ಶೆಟ್ಟಿ, ರೋಟರಿ ಜಿಲ್ಲಾಧ್ಯಕ್ಷ ರೊ|ಸತೀಶ್ ಬೋಳಾರ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ|ಅನಂತ ಭಟ್ ಮಚ್ಚಿಮಲೆ ಗುರುವಾಯನಕರೆ ಎಕ್ಸೆಲ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಅಭಿರಾಮ್ ಬಿ ಎಸ್, ಎಕ್ಸೆಲ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ನವೀನ್ ಕುಮಾರ್ ಮರಿಕೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here