ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ  ಸೆ.10ರಂದು ಸೇಕ್ರೆಡ್ ಹಾರ್ಟ್  ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿಯವರು ಕೊಡುಗೆಯಾಗಿ ನೀಡಿದ ವಿಜ್ಞಾನ ಪ್ರಯೋಗಾಲಯವನ್ನು ಸೊಸೈಟಿಯ ಗೌರವಾಧ್ಯಕ್ಷರಾದ ವಂ|ಸ್ವಾ ಲಾರೆನ್ಸ್ ಮಸ್ಕರೇನಸ್ ರವರು ರಿಬ್ಬನ್ ಕತ್ತರಿಸುವುದರ ಮೂಲಕ ಉದ್ಘಾಟಿಸಿದರು.ಶಾಲಾ ಸಂಚಾಲಕರಾದ  ವಂ|ಸ್ವಾ ಸ್ಟ್ಯಾನಿ ಗೋವಿಯಸ್ ರವರು ಆಶೀರ್ವಚನವನ್ನು ಮಾಡಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ  ವಂ|ಸ್ವಾ ದೀಪಕ್ ಲಿಯೋ ಡೇಸರವರು, ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ|ಸ್ವಾ ಜೆರೋಮ್ ಡಿಸೋಜರವರು, ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೊ- ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಲ್ಯಾನ್ಸಿ ಪಿಂಟೊರವರು, ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರು ಮತ್ತು ಸದಸ್ಯರು, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರು ಮತ್ತು ಸದಸ್ಯರು,ಮಕ್ಕಳ ಪೋಷಕರು, ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವನ್ನು ಫ್ರಾನ್ಸಿಸ್ ವಿ.ವಿ ರವರು ನಿರೂಪಿಸಿ, ವಿವೇಕ್ ವಿನ್ಸೆಂಟ್ ಪಾಯಿಸ್ ರವರು ಸ್ವಾಗತಿಸಿ, ವಂ|ಸ್ವಾ ದೀಪಕ್ ಲಿಯೋ ಡೇಸರವರು ಧನ್ಯವಾದವನ್ನು ಸಮರ್ಪಿಸಿದರು.

LEAVE A REPLY

Please enter your comment!
Please enter your name here