ಪಟ್ರಮೆ: ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಲ್ಲ. ಮಕ್ಕಳ ಮಾನಸಿಕ ಮತ್ತು ಭೌತಿಕ ಬೆಳವಣಿಗೆ ಆಗಬೇಕಾದರೆ ಪಠ್ಯೇತರ ಚಟುವಟಿಕೆಗಳು ಕೂಡ ಅತ್ಯಗತ್ಯ. ಪಂಚ ತತ್ವಗಳಿಂದ ನಿರ್ಮಾಣವಾದ ನಮ್ಮ ಈ ಶರೀರಕ್ಕೆ ಪೂರಕವಾದ ಕ್ರಿಯಾಶೀಲ ಚಟುವಟಿಕೆಗಳು ಅತಿ ಅವಶ್ಯಕ. ಭಾರತೀಯ ಶಿಕ್ಷಣ ಪದ್ಧತಿಯು ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಾ ಬರುತ್ತಿದ್ದು ಭವಿಷ್ಯದ ದೃಷ್ಟಿಯಲ್ಲಿ ಅದು ಅತ್ಯವಶ್ಯಕ ಎಂದು ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ ನುಡಿದರು.
ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ನಡೆದ ಕೊಕ್ಕಡ ಕ್ಲಸ್ಟರ್ ನ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ 2023-24 ನ್ನು ಉದ್ಘಾಟಿಸಿ ಮಾತನಾಡಿದರು.
ವೇದಿಕೆಯಲ್ಲಿ ಕೊಕ್ಕಡ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ವಿಲ್ಫ್ರೆಡ್ ಪಿಂಟೋ ಮಾತನಾಡಿ, ಪ್ರತಿಭಾ ಕಾರಂಜಿಯ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಸೂಕ್ತ ವೇದಿಕೆಯಾಗಿದ್ದು, ವರ್ಷಕ್ಕೊಮ್ಮೆ ಬೇರೆ ಬೇರೆ ಶಾಲೆಯಲ್ಲಿ ಸ್ಪರ್ಧೆ ನಡೆದಾಗ ಹಲವು ವಿಷಯಗಳನ್ನು ಒಂದು ಶಾಲೆಯಿಂದ ಮತ್ತೊಂದು ಶಾಲೆಯಲ್ಲಿ ಕಲಿತುಕೊಳ್ಳಲು ಅವಕಾಶ ಸಿಕ್ಕಂತಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಸಮಿತಿಯ ಸದಸ್ಯ ಕಿರಣ್ ಕೊಡೆಂಚಡ್ಕ ವಹಿಸಿದ್ದರು.ಪಟ್ಟೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ದೇವಚಂದ್ರ ಮೊಟ್ಟಿಕಲ್ಲು ಉಪಸ್ಥಿತರಿದ್ದರು.ಕೊಕ್ಕಡ ವಲಯದ 10 ಶಾಲೆಗಳ ವಿದ್ಯಾರ್ಥಿಗಳು ಹಿರಿಯ ಹಾಗೂ ಕಿರಿಯ ವಿಭಾಗದಲ್ಲಿ 27 ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ವಿದ್ಯಾರ್ಥಿಗಳ ಸರಸ್ವತಿ ವಂದನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಸ್ವಾಗತಿಸಿದರು. ಸಹ ಶಿಕ್ಷಕಿ ಸ್ವಾತಿ ಕೆ.ವಿ ವಂದಿಸಿದರು. ಸಹ ಶಿಕ್ಷಕಿ ಶುಭಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.
ಪ್ರಶಸ್ತಿಯ ವಿವರ:
ಕಿರಿಯ ವಿಭಾಗ:
ಪ್ರಥಮ – ಸಂತ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆ, ಕೊಕ್ಕಡ.
ದ್ವಿತೀಯ – ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಉಪ್ಪಾರಪಳಿಕೆ.
ತೃತಿಯ – ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಸೌತಡ್ಕ.
ಹಿರಿಯ ವಿಭಾಗ:
ಪ್ರಥಮ – ಸಂತ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆ, ಕೊಕ್ಕಡ.
ದ್ವಿತೀಯ – ಶ್ರೀ ವಿಷ್ಣುಮೂರ್ತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಪಟ್ಟೂರು.
ತೃತೀಯ – ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳ್ಳಿಂಗೇರಿ.