ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ತಾಲೂಕಿನ ಖ್ಯಾತ ವಕೀಲರಾದ ಬಿ.ಕೆ ಧನಂಜಯ ರಾವ್ ಆಗಮಿಸಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ದಿನದ ಮಹತ್ವ ಮತ್ತು ನಾವು ಪಾಲಿಸಬೇಕಾದ ಕರ್ತವ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಹಾಗೂ ಪ್ರಾದ್ಯಾಪಕ ಈಶ್ವರ ಶರ್ಮ ಹಾಜರಿದ್ದರು.ನಾಡಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮಕ್ಕೆ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಸಾಕ್ಷಿಯಾದರು.
p>