ಧರ್ಮಸ್ಥಳ: ನೇತ್ರಾವತಿಯಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

0

ಧರ್ಮಸ್ಥಳ: ಮಹಾತ್ಮ ಗಾಂಧೀಜಿಯವರ ಜನ್ಮದಿನದ ಅಂಗವಾಗಿ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ,ಮಂಗಳೂರು ವತಿಯಿಂದ ಜಿಲ್ಲಾದ್ಯಂತ ಸೆ.15 ರಿಂದ ಅ.2ರವರೆಗೆ ಸ್ವಚ್ಛತಾ ಅಭಿಯಾನವನ್ನು”ಸ್ವಚ್ಛತೆಯೇ ಸೇವೆ” ಎಂಬ ಧ್ಯೇಯವಾಕ್ಯದಡಿಯಲ್ಲಿ ಗ್ರಾಮ ಪಂಚಾಯತ್, ಧರ್ಮಸ್ಥಳ ಹಾಗೂ ತಾಲೂಕು ಪಂಚಾಯತ್, ಬೆಳ್ತಂಗಡಿಯ, ಸಹಯೋಗದೊಂದಿಗೆ ಸೆ.15,ಶುಕ್ರವಾರದಂದು,ನೇತ್ರಾವತಿ ಸ್ನಾನಘಟ್ಟವನ್ನು ಸ್ವಚ್ಛಗೊಳಿಸುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವುದರ ಸಲುವಾಗಿ ಪ್ರತಿಜ್ಞಾ ವಿಧಿಯನ್ನು ಭೋದಿಸಲಾಹಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು, ಉಜಿರೆಯ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಧ್ಯಾಹ್ನ 3 ಗಂಟೆಗೆ ಶುರುವಾದ ಸ್ವಚ್ಛತಾ ಅಭಿಯಾನದಲ್ಲಿ ಸುಮಾರು 50 ಕ್ಕೂ ಹೆಚ್ಚು ಮಂದಿ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದರು.

ಪ್ರೊ.ದೀಪಾ ಆರ್.ಪಿ,ಎನ್.ಎಸ್.ಎಸ್ ನ ಯೋಜನಾಧಿಕಾರಿಗಳು, ಧರ್ಮಸ್ಥಳ, ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಸ್ಥಳೀಯ ಗ್ರಾಮಸ್ಥರು, ಎನ್.ಎಸ್.ಎಸ್ ನ ಸ್ವಯಂಸೇವಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here