ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ಅಡಿಯಲ್ಲಿ ಇಂದು ಬೆಳ್ತಂಗಡಿ ತಾಲೂಕು ಮಟ್ಟದ ಸ್ಪರ್ಧೆಯು ಸರಕಾರಿ ಜೂನಿಯರ್ ಕಾಲೇಜ್ ನ (ಪ್ರೌಢಶಾಲಾ ವಿಭಾಗ) ಬೆಳ್ತಂಗಡಿಯಲ್ಲಿ ನಡೆಯಿತು.
ಈ ಸ್ಪರ್ಧೆಯಲ್ಲಿ ಜಾನಪದ ನೃತ್ಯ, ಬಿತ್ತಿಪತ್ರ ರಚನೆ, ಪಾತ್ರಾಭಿನಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಈ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಜಾನಪದ ನೃತ್ಯದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಹಾಗೂ ಪಾತ್ರ ಅಭಿನಯದಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ವಿಜೇತ ತಂಡಕ್ಕೆ ಸಂಸ್ಥೆಯ ಉಪ ಪ್ರಾಂಶುಪಾಲರು ಹಾಗೂ ಶಿಕ್ಷಕರು ಸಹಕರಿಸಿದರು.
p>