ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದಿಂದ ಮುಂಡಾಜೆ ಗ್ರಾಮ ಸಮಿತಿ ಭೇಟಿ ಕಾರ್ಯಕ್ರಮ

0

ಮುಂಡಾಜೆ: ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಗ್ರಾಮ ಬೇಟಿಯ ಪ್ರಯುಕ್ತ ಮುಂಡಾಜೆ ಗ್ರಾಮ ಸಮಿತಿ ಭೇಟಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರನ್ನು ಮುಂಡಾಜೆ ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ನಾಮದೇವ್ ರಾವ್ ಸ್ವಾಗತಿಸಿದರು.

ನಂತರ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನೂತನ ಅದ್ಯಕ್ಷರಾಗಿ ಆಯ್ಕೆಯಾದ ಕೆಂ.ಎಂ.ನಾಗೇಶ್ ಕುಮಾರ್ ಗೌಡ ಅವರನ್ನು ಗೌರವಿಸಲಾಯಿತು.ವೇದಿಕೆಯಲ್ಲಿ ತಾಲೂಕು ಕಾಂಗ್ರೆಸ್ ಮುಖಂಡರಾದ ಮುಹಮ್ಮದ್ ಕಲಂದರ್ ಶಾ, ರಜತ್ ಗೌಡ, ಬೆಳ್ತಂಗಡಿ ಗ್ರಾಮೀಣ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಶ್ರಫ್ ನೆರಿಯ, ಬ್ಲಾಕ್ ಕಾಂಗ್ರೆಸ್ ಮುಂಡಾಜೆ ಗ್ರಾಮ ಸಮಿತಿಯ ಅಧ್ಯಕ್ಷರಾದ ನಾರಾಯಣ ಗೌಡ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬೂತ್ ಸಮಿತಿ ಅಧ್ಯಕ್ಷರು, ಗ್ರಾಮ ಸಮಿತಿ ಪದಾಧಿಕಾರಿಗಳು, ಮುಂಚೂಣಿ ಘಟಕದ ನಾಯಕರು, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.ಕಾರ್ಯಕ್ರಮದ ಕೊನೆಯಲ್ಲಿ ನಾಗರಾಜ್ ನಾಯ್ಕ ಇವರ ಧನ್ಯವಾದ ನೀಡಿದರು.

LEAVE A REPLY

Please enter your comment!
Please enter your name here