ಬೆಳ್ತಂಗಡಿ: 2023-24ನೇ ಸಾಲಿನಲ್ಲಿ ಅ.28ರಂದು ಸರ್ಕಾರದ ವತಿಯಿಂದ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ.ಈ ಜಯಂತಿಯ ಪ್ರಯುಕ್ತ ಪರಿಶಿಷ್ಟ ಪಂಗಡ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಹೆಸರಿನಲ್ಲಿ ರಾಜ್ಯ ಮಟ್ಟದ ಪಶಸ್ತಿಯನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿದೆ.
ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ, ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ವ್ಯಕ್ತಿಗಳು ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ನಿಗದಿತ ಅರ್ಜಿ ನಮೂನೆಗಳನ್ನು ಸಹಾಯಕ ನಿದೇಶಕರು (ಗ್ರೇಡ್-2)ರವರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ತಾಲೂಕು ಇಲ್ಲಿಂದ ಪಡೆದು ಸೆ.30ರೊಳಗೆ ಸಂಪೂರ್ಣ ಮಾಹಿತಿಯನ್ನು ಸಹಾಯಕ ನಿದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಬೆಳ್ತಂಗಡಿ ತಾಲೂಕು ಇಲಾಖಾ ಕಛೇರಿಗೆ ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದೇಶಕರು ತಿಳಿಸಿದ್ದಾರೆ.
p>