ಧರ್ಮಸ್ಥಳ: ಗ್ರಾ.ಪಂ ವ್ಯಾಪ್ತಿಯಲ್ಲಿ ಸ್ವಚ್ಛತೆಯೇ ಸೇವೆ ಬ್ಲ್ಯಾಕ್ ಸ್ಪಾಟ್ ಸ್ಥಳಗಳಲ್ಲಿ ಸ್ವಚ್ಛತೆಗೊಳಿಸುವುದರ ಮೂಲಕ ಗಿಡ ನೆಡುವ ಕಾರ್ಯಕ್ರಮ

0

ಧರ್ಮಸ್ಥಳ: ಸ್ವಚ್ಛತೆಯೇ ಸೇವೆ ಬ್ಲ್ಯಾಕ್ ಸ್ಪಾಟ್ ಸ್ಥಳಗಳಲ್ಲಿ ಸ್ವಚ್ಛತೆಗೊಳಿಸಿ ಆಯ್ದ ಗಿಡ ನೆಡುವ ಕಾರ್ಯಕ್ರಮ ಧರ್ಮಸ್ಥಳ ಗ್ರಾಮ ಪಂಚಾಯತಿನ ವ್ಯಾಪ್ತಿಯಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಧರ್ಮಸ್ಥಳ ಸ್ವಚ್ಛತೆಯೇ ಸೇವೆ ನಿರಂತರ ಸ್ವಚ್ಛತಾ ಕಾರ್ಯಕ್ರಮದಡಿ ಈ ದಿನ ಧರ್ಮಸ್ಥಳ ಗ್ರಾಮ್ ಪಂಚಾಯಿತಿನ ವ್ಯಾಪ್ತಿಯಲ್ಲಿ ಹೆಚ್ಚು ಕಸ ತುಂಬಿರುವ ಬ್ಲ್ಯಾಕ್ ಸ್ಪಾಟ್ ಗಳನ್ನು ಗುರುತಿಸಿ ನೇರ್ತನೆ, ಕೆಎಸ್ಆರ್ಟಿಸಿ ಡಿಪ್ಪೋ ಬಳಿ, ಸ್ವಚ್ಛಂಕೀರ್ನ ಘಟಕ, ಕನ್ಯಾಡಿ, ದೊಂಡೋಲೆ, ಕೆಲವೊಂದು ಆಯ್ದ ಪ್ರದೇಶದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಗ್ರಾಮದ ಸ್ವಚ್ಛತೆಯ ನಿರಂತರತೆಯನ್ನು ಕಾಪಾಡುವ ಬಗ್ಗೆ ಮನವರಿಕೆ ಮಾಡಲಾಯಿತು.ಗ್ರಾಮದ ಸ್ವಚ್ಛತೆಯಲ್ಲಿ ಪಾಲ್ಗೊಂಡು ಸಹಕರಿಸುತ್ತಿರುವ ಎಲ್ಲರಿಗೆ ಉಪಾಧ್ಯಕ್ಷರಾದ ಪಿ.ಶ್ರೀನಿವಾಸ್ ರಾವ್ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯಿತ್ ಅಧ್ಯಕ್ಷೆ ವಿಮಲ, ಸದಸ್ಯರಾದ ಜಯ ಮೋನಪ್ಪಗೌಡ, ಶ್ರೀರಾಮಚಂದ್ರ ರಾವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಕಾರ್ಯದರ್ಶಿ ದಿನೇಶ್ ಯಂ, ಲೆಕ್ಕ ಸಹಾಯಕರಾದ ಪ್ರಮೀಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here