ಬೆಳ್ತಂಗಡಿ: ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಸೇವನೆ ಮಾಡಿದ್ದ ಆರೋಪದಲ್ಲಿ ಚಿಬಿದ್ರೆ ಗ್ರಾಮದ ಮೊಹಮ್ಮದ್ ಮುಸ್ತಾಫಾ (25) ಎಂಬಾತನನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಘಟನೆ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಸಾರ್ವಜನಿಕ ಸ್ಥಳಗಳಲ್ಲಿ ಸೆ.28 ರಂದು ಮಧ್ಯಾಹ್ನ ಮಾದಕ ವಸ್ತುವಾದ ಗಾಂಜಾವನ್ನು ಸೇವನೆ ಮಾಡಿದ್ದ ಆಪಾದಿತ ಚಿಬಿದ್ರೆ ಗ್ರಾಮದ ಮೊಹಮ್ಮದ್ ಮುಸ್ತಾಫಾ ಎಂಬಾತನನ್ನು ಧರ್ಮಸ್ಥಳ ಠಾಣಾ ಪೊಲೀಸರು ಪತ್ತೆ ಹಚ್ಚಿ ಠಾಣೆಯ ಉಪನಿರೀಕ್ಷಕ ಅನಿಲ್ ಕುಮಾರ್ ಡಿ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಅಪಾಧಿತ ಗಾಂಜಾ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:72/2023 ಕಲಂ:27(ಬಿ) ಎನ್ ಡಿಪಿಎಸ್ ಕಾಯಿದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
p>