ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು, ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ, ಸಿಐಎಸ್ ಎಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೊಡೆ-ಎಲ್ಲೆ ಸಾಕ್ಷ್ಯಚಿತ್ರವನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯ ಶಿಗ್ಗಾವಿಯ ವಿಶ್ರಾಂತ ಉಪ ಕುಲಪತಿ ಡಾ.ಕೆ.ಜಿನ್ನಪ್ಪ ಗೌಡ ಅವರು ಅ.2 ರಂದು ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ವಹಿಸಿದ್ದರು.
ವೇದಿಕೆಯಲ್ಲಿ ಮುಂಬಯಿ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ತಾಳ್ತಜೆ ವಸಂತ್ ಕುಮಾರ್, ಸಾಕ್ಷ್ಯಚಿತ್ರ ನಿದೇರ್ಶಕ ಡಾ.ಸುಂದರ ಕೇನಾಜೆ, ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ, ಉಜಿರೆ ಎಸ್.ಡಿ.ಎಂ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ದಿವಾಕರ ಕೊಕ್ಕಡ, ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರಿನ ಅಧ್ಯಕ್ಷ ಡಾ.ವಿಶ್ವನಾಥ ಬದಿಕಾನ, ಸಾಕ್ಷ್ಯಚಿತ್ರ ನಿರ್ಮಾಪಕ ಭರತೇಶ ಅಲಸಂಡೆಮಜಲು ಉಪಸ್ಥಿತರಿದ್ದರು.
ಹಾಗೂ ಪುರ್ಸ ಕಟ್ಟುನ ಕಲಾವಿದರು, ಗೌಡ ಸಮುದಾಯ ಪ್ರಮುಖರು ಉಪಸ್ಥಿತರಿದ್ದರು.