ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಎನ್ ಎಸ್ ಎಸ್, ಎನ್ ಸಿ ಸಿ, ರೋವರ್ಸ್ ರೇಂಜರ್, ಯೂತ್ ರೆಡ್ ಕ್ರಾಸ್ ಆಶ್ರಯದಲ್ಲಿ ಗಾಂಧೀ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಹಾಗೂ ಸ್ವಚ್ಛತಾ ಆಂದೋಲನ ಕಾರ್ಯಕ್ರಮವು ಅ. 2 ರಂದು ನಡೆಯಿತು.ಈ ಕಾರ್ಯಕ್ರಮದಲ್ಲಿ ಗಣ್ಯರ ಭಾವಚಿತ್ರಕ್ಕೆ ಪುಷ್ಪಗಳನ್ನು ಅರ್ಪಿಸಿ ಗೌರವ ಸೂಚಿ ಸಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊ.ಈಶ್ವರ್ ಗೌಡ ರವರು ಮಾತನಾಡಿ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜೀವನದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಅಲೆಕ್ಸ್ ಐವನ್ ಸೀಕ್ವೇರಾರವರು ಮಾತನಾಡಿ “ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು ಮತ್ತು ಸಂಯಮವನ್ನು ಅಳವಡಿಸಿಕೊಳ್ಳಬೇಕು” ಎಂದು ಸಂದೇಶ ನೀಡಿದರು.
ಈ ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿಗಳಾದ ಶ್ರೀ ಪ್ರಶಾಂತ್ ಎಂ, ಕುಮಾರಿ ಜೀವಾ ವಿ ಸಿ., ಕುಮಾರಿ ರಕ್ಷಿತಾ ಶೆಟ್ಟಿ, ಸ್ವಯಂ ಸೇವಕ ಸೇವಕಿಯರು, ಎನ್ ಸಿ ಸಿ ಘಟಕದ ಆಫೀಸರ್ ಲೆಫ್ಟಿನೆಂಟ್ ಆಲ್ವಿನ್ ಕೆ ಜಿ, ಹಾಗೂ ಕೆಡೆಟ್ಸ್ ಗಳು , ರೋವರ್ಸ್ ರೇಂಜರ್ ಘಟಕದ ನ ಆಫೀಸರ್ ಪ್ರೀತಿ ಡಿಸೋಜ, ಯೂತ್ ರೆಡ್ ಕ್ರಾಸ್ ಘಟಕದ ಆಫೀಸರ್ ವಿಯೋಲಾ, ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ರಶ್ಮಿತ ನಿರೂಪಿಸಿದರು . ವಿಲಾಸ್ ಸ್ವಾಗತಿಸಿ, ಸಿಲ್ವಿಯಾ ವಂದಿಸಿದರು.ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸೇಕ್ರೆಡ್ ಹಾರ್ಟ್ ಕಾಲೇಜಿನ ಆವರಣದಲ್ಲಿ ಸ್ವಚ್ಚತಾ ಅಭಿಯಾನ ಜರುಗಿತು.