ನ್ಯಾಯತರ್ಪು: ರಕ್ತೇಶ್ವರಿಪದವು ಅಂಗನವಾಡಿ ಕೇಂದ್ರದಲ್ಲಿ ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತು ಆಯುಷ್ ಇಲಾಖೆ, ಕರ್ನಾಟಕ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಬೆಳ್ತಂಗಡಿ ಹಾಗೂ ಮಂಗಳೂರು, ಅಂಗನವಾಡಿ ಕೇಂದ್ರ ರಕ್ತೇಶ್ವರಿಪದವು ಸಹಭಾಗಿತ್ವದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಮತ್ತು ಆರೋಗ್ಯ ಅರಿವು ಕಾರ್ಯಕ್ರಮ ಅ.7 ರಂದು ಅಂಗನವಾಡಿ ಕೇಂದ್ರದಲ್ಲಿ ಜರುಗಿತು.
ಕಣಿಯೂರು ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ.ಸಹನಾ.ಕೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತಾ ಮಹಿಳೆಯರು ಹಾಗೂ ಮಕ್ಕಳು ಆರೋಗ್ಯ ಆರಿವು ಮಾಹಿತಿ ನೀಡಿದರು.
ಬೆಳ್ತಂಗಡಿ ಆರೋಗ್ಯ ಶಿಕ್ಷಣ ಇಲಾಖೆ ಅಧಿಕಾರಿ ಅಮ್ಮಿ ಸಿಸ್ಟರ್ ಮಾತನಾಡುತ್ತಾ, ವಿಶ್ವ ರೇಬೀಸ್ ರೋಗ ತಡೆಗಟ್ಟುವ ಆರಿವು ಹಾಗೂ ದಿನನಿತ್ಯದ ತರಕಾರಿ ಆಹಾರ ಪದಾರ್ಥಗಳ ಸೇವನೆಯಿಂದ ನಮ್ಮ ಆರೋಗ್ಯ ಸುಧಾರಿಸಲು ಹೇಗೆ ಸಾಧ್ಯ ಎಂದು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು.ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಸುರೇಖಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ, ಸದಸ್ಯರಾದ ಸುಧಾಕರ ಮಜಲು, ವಿಜಯ ಗೌಡ ಕಲಾಯಿತೊಟ್ಟು, ಭಾರತೀಯ ಭೂಸೇನೆ ನಿವೃತ್ತ ಸೈನಿಕ ದಿನೇಶ್ ಗೌಡ ಕೆ., ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ದನ ಗೌಡ ಕೆ, ನ್ಯಾಯತರ್ಪು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಸಂತ ಕುಮಾರ್, ಭಜನಾ ಮಂಡಳಿ ಅಧ್ಯಕ್ಷ ವಸಂತ ಗೌಡ ಕೆ., ರಕ್ತೇಶ್ವರಿಪದವು ಕ್ರೀಡಾ ಸಂಘದ ಅಧ್ಯಕ್ಷ ಸಿದ್ದಪ್ಪ ಗೌಡ, ಕಣಿಯೂರು ಪ್ರಾಥಮಿಕ ಅರೋಗ್ಯ ಸುರಕ್ಷಣಾಧಿಕಾರಿ ಸುನೀತಾ ಹೆಗ್ಡೆ, ಅಂಗನವಾಡಿ ಕೇಂದ್ರ ಕಣಿಯೂರು ವಲಯ ಮೇಲ್ವಿಚಾರಕಿ ನಂದನ ಶೆಟ್ಟಿ ಹಾಗೂ ನ್ಯಾಯತರ್ಪು ಗ್ರಾಮ ಸಮುದಾಯ ಆರೋಗ್ಯ ಅಧಿಕಾರಿ ವೆಂಕಟೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಳಿಯ ಗ್ರಾಮದ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷೆ, ಹಾಲಿ ಸದಸ್ಯೆ ಸುಭಾಷಿಣಿ ಜನಾರ್ದನ ಗೌಡ ಕೆ,ಸಭೆಯಲ್ಲಿ ಉಪಸ್ಥಿತರಿದ್ದರು.
ಮಹಿಳೆಯರು ಮನೆಯಲ್ಲಿ ತಯಾರಿಸಿದ ಬಗೆಯ 40 ಕ್ಕೂ ಹೆಚ್ಚಿನ ತರಕಾರಿ ತಿಂಡಿ,ಪದಾರ್ಥಗಳನ್ನು ತಂದಿದ್ದರು.
ಸ್ಥಳೀಯ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮಕ್ಕಳ ಪೋಷಕರು, ಬೆಳ್ತಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಎರುಕಡಪ್ಪು, ಕಳಿಯ, ಕುಂಟಿನಿ, ಗೋವಿಂದೂರು, ನಾಳ ಅಂಗನವಾಡಿ ಕಾರ್ಯಕರ್ತೆಯರು, ನ್ಯಾಯತರ್ಪು, ಕಳಿಯ ಗ್ರಾಮದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿ ಸುನೀತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ಸ್ವಾಗತಿಸಿದರು.ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಉಮೇಶ್ ಕೇಲ್ದಡ್ಕ ಕಾರ್ಯಕ್ರಮ ನಿರೂಪಿಸಿ, ಕುಶಾಲಪ್ಪ ಗೌಡ ಕೆ ಧನ್ಯವಾದವಿತ್ತರು.