ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

0

ಗಂಡಿಬಾಗಿಲು: ಸಿಯೋನ್ ಆಶ್ರಮ (ರಿ.), ಗಂಡಿಬಾಗಿಲು ಇಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಮೇರಿ ಯು.ಪಿ.ಯವರು ದೀಪ ಬೆಳಗಿಸಿ ಶುಭ ಹಾರೈಸಿದರು.ಸಂಸ್ಥೆಯ ಮ್ಯಾನೇಜರ್‌ರವರಾದ ಸಂಧ್ಯಾಸುಭಾಷ್‌ರವರು ವಿಶ್ವಮಾನಸಿಕ ಆರೋಗ್ಯ ದಿನಾಚರಣೆಯ ಮಹತ್ವವನ್ನು ವಿವರಿಸಿದರು.

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಸಿಯೋನ್ ಆಶ್ರಮದ ನಿವಾಸಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಮತ್ತು ಮನೋರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರಿಂದ ಮಧ್ಯಾಹ್ನದ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿತ್ತು.

ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here