ತೆಂಕಕಾರಂದೂರು: ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆಗೆ ಬೀಳ್ಕೊಡುಗೆ

0

ತೆಂಕಕಾರಂದೂರು: ತೆಂಕಕಾರಂದೂರು ಅಂಗನವಾಡಿ ಕೇಂದ್ರದಲ್ಲಿ ಸುಮಾರು 37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಶಾಂತಿ ಇವರಿಗೆ ತೆಂಕಕಾರಂದೂರು ಗ್ರಾಮಸ್ಥರ ಪರವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಜೊತೆಗೆ ಉದ್ಘಾಟಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ ಸದಸ್ಯರಾದ ನಿಜಾಮ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಕೆ.ವಸಂತ ಸಾಲಿಯಾನ್, ಬಳಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಅಳದಂಗಡಿ ಪ್ರಾ.ಕೃ.ಪ.ಸಂಘದ ನಿರ್ದೇಶಕರಾದ ಜಿನ್ನಪ್ಪ ಪೂಜಾರಿ ಕಾಪಿನಡ್ಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಗುಲಾಬಿ, ಗ್ರಾ.ಪಂ.ಸದಸ್ಯರುಗಳಾದ ಲೀಲಾವತಿ, ಪ್ರಸನ್ನ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶಾಂತಿ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಗಾಂಧಿ ಗ್ರಾಮ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ನ ಪರವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ರವನ್ನು ಸನ್ಮಾನಿಸಲಾಯಿತು.ನಿವೃತ್ತ ಅಂಚೆ ಪಾಲಕ ನಾರಾಯಣ ಗೌಡ ರವರು ಅನಿಸಿಕೆ ವ್ಯಕ್ತಪಡಿಸಿದರು.ಸ್ವಾಗತ್ ಫ್ರೆಂಡ್ಸ್ ನ ಮುಂದಾಳು ಮುಸ್ತಫ ಮಂಜೊಟ್ಟಿ, ಸಂಶುದ್ದೀನ್ ಕಟ್ಟೆ, ಬಾಲ ವಿಕಾಸ ಸಮಿತಿ ಸರ್ವ ಸದಸ್ಯರು, ತೆಂಕಕಾರಂದರು ಸ್ತ್ರೀ ಶಕ್ತಿ ಸಂಘದ ಸದಸ್ಯರು, ಮಕ್ಕಳ ಪೋಷಕರು, ಊರಿನ ಸಮಸ್ತ ಜನರು, ಅಂಗನವಾಡಿ ಕೇಂದ್ರ ದ ಸಹಾಯಕಿ ಲಿಲ್ಲಿ, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿ ಇವರು ಅಂಗನವಾಡಿ ಕೇಂದ್ರಕ್ಕೆ ಮಿಕ್ಸಿಯನ್ನು ಉಡುಗೊರೆಯಾಗಿ ಕೊಡುಗೆ ನೀಡಿದರು.ಕಾರ್ಯಕ್ರಮವನ್ನು ಕಾಪಿನಡ್ಕ ಅಂಗನವಾಡಿ ಕಾರ್ಯಕರ್ತೆ ವಸುಂದರಾ ನಿರೂಪಿಸಿ, ತೆಂಕಕಾರಂದೂರು ಅಂಗನವಾಡಿ ಕಾರ್ಯಕರ್ತೆ ಸ್ಫೂರ್ತಿ.ಎಸ್. ಸ್ವಾಗತಿಸಿ, ಧನ್ಯವಾದವಿತ್ತರು.

p>

LEAVE A REPLY

Please enter your comment!
Please enter your name here