

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿನ ನ್ಯೂನತೆಗಳನ್ನು ಸರಿಪಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಬೆಳ್ತoಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಮನವಿ ನೀಡಿದರು.ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಹಲವಾರು ನ್ಯೂನತೆಗಳಿದ್ದು ಸದ್ರಿ ನ್ಯೂನತೆಗಳ ಬಗ್ಗೆ ಡಯಾಲಿಸಿಸ್ ರೋಗಿಗಳು ನನಗೆ ಪದೇ ಪದೇ ದೂರು ನೀಡುತ್ತಿದ್ದಾರೆ.

ತಾವು ಇತ್ತೀಚೆಗೆ ಬೆಳ್ತಂಗಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸದ್ರಿಆಸ್ಪತ್ರೆಗೆ ಭೇಟಿ ನೀಡಿ ಕುಂದು ಕೊರತೆಗಳ ಬಗ್ಗೆ ಅರಿತಿರುವಿರಿ. ಆದರೆ ಕೆಲವೊಂದು ಮುಖ್ಯವಾದ ಸಮಸ್ಯೆಗಳು ಇನ್ನೂ ಕೂಡ ಬಗೆಹರಿದಿಲ್ಲ ಎಂದು ನನಗೆ ರೋಗಿಗಳು ದೂರು ನೀಡಿರುತ್ತಾರೆ.ಆದುದರಿಂದ ಸದ್ರಿ ನ್ಯೂನತೆಗಳನ್ನು ಸರಿಪಡಿಸುವರೇ ಸಂಬoಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕಾಗಿ ಅವರು ಸಚಿವರಲ್ಲಿ ವಿನಂತಿಸಿದ್ದಾರೆ.ಉದ್ಯಮಿ ರವಿಶಂಕರ ಶೆಟ್ಟಿ, ಬಡಾಜೆಗುತ್ತು ಮತ್ತು ಕೆ.ಪಿ.ಸಿ.ಸಿ ಕಾರ್ಯದರ್ಶಿ, ರಾಜ್ಯ ಅಲ್ಪ ಸಂಖ್ಯಾತ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಅಶ್ವಿತ್ ಜೈನ್ ಜೊತೆಗಿದ್ದರು.