



ಬೆಳ್ತಂಗಡಿ: ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಯನ್ನು ಇಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆಚರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಉಬಯ ಬ್ಲಾಕ್ ಅಧ್ಯಕ್ಷರಾದ ಕೆ.ಸತೀಶ್ ಬಂಗೇರ ಕಾಶಿಪಟ್ನ, ಕೆ.ಎಮ್ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ದರಣೇಂದ್ರ ಕುಮಾರ್, ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಶಂಕರ್ ವಿಠಲ್ ಬಂದಾರು, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮಹಮ್ಮದ್ ಹನೀಪ್ ಕಾಶಿಬೆಟ್ಟು, ಬೆಳ್ತಂಗಡಿ ಕಾಂಗ್ರೆಸ್ ಪದವಿದರ ಕ್ಷೇತ್ರದ ನಗರ ಸಮಿತಿಯ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ, ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.








