ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅಭ್ಯಾಗತರಾದ ಯಕ್ಷಗಾನ ವಿದ್ವಾಂಸರಾದ ಡಾ.ಶ್ರುತಕೀರ್ತಿರಾಜ ಅವರು ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಶುಭಸಂದೇಶಗಳನ್ನು ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಅವರು ಕುಮಾರವ್ಯಾಸ ಭಾರತದ ಪದ್ಯವನ್ನು ಓದುವುದರ ಮೂಲಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾ, ಕನ್ನಡ ಭಾಷೆ ಸಾಹಿತ್ಯದ ಮಹತ್ವದ ಕುರಿತಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಚಾರ್ಯರಾದ ಡಾ.ರಾಜೇಶ್ ಬಿ ಅವರು ಉಪಸ್ಥಿತರಿದ್ದರು.ಕಾರ್ಯಕ್ರಮದ ನಿರೂಪಣೆಯನ್ನು ಕನ್ನಡ ವಿಭಾಗದ ಮಹಾವೀರ್ ಜೈನ್ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
p>