ನಾವೂರು: ಸ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

0

ನಾವೂರು: ಸ.ಹಿ.ಪ್ರಾ.ಶಾಲೆ ನಾವೂರು ಇಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮೊಬೈಲ್‌ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಅ.20ರಂದು ನಡೆಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸುನಂದ ವಹಿಸಿದ್ದರು.

ಮುಖ್ಯೋಪಾಧ್ಯಾಯಿನಿ ರೋಹಿಣಿ ಕೆ ರವರು ಸಮುದಾಯದತ್ತ ಶಾಲಾ ಕಾರ್ಯಕ್ರಮದ ಮಹತ್ವ ಮತ್ತು ಉದ್ಶದೇಶಗಳ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಶಿಕ್ಷಣ ತಜ್ಞರು ಪೋಷಕರೂ ಆದ ಡಾ.ಪ್ರದೀಪ್ ರವರು ಮೊಬೈಲ್ ಬಳಕೆಯ ಸಾಧಕ ಬಾಧಕಗಳನ್ನು ವಿವರಿಸುತ್ತಾ ಮೊಬೈಲಿನಿಂದ ಹೊರಡುವ ವಿಕಿರಣಗಳು ಮಕ್ಕಳ ಆರೋಗ್ಯದ ಮೇಲೆ ಗಂಭೀರ ಸಮಸ್ಯೆಗಳನ್ನು ಉಂಟು ಮಾಡುತ್ತಿದ್ದು ಪೋಷಕರು ಮಕ್ಕಳು ಮೊಬೈಲ್ ಬಳಸದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ನಂತರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳು ಪೋಷಕರೂ ಆದ ಯೋಗಿಶ್ ರವರು ಮಾತನಾಡಿ ಸರಕಾರಿ ಶಾಲೆಯ ಅಭಿವೃದ್ಧಿಯಲ್ಲಿ ಪೋಷಕರಾದ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು.ಸಹ ಶಿಕ್ಷಕಿ ಶ್ರೀಲತಾ ಸಿ ಎಚ್ ರವರು SEAS ಪರೀಕ್ಷೆಯ ಬಗ್ಗೆ ಮಾಹಿತಿ ನೀಡಿದರು.

ನಂತರ ಕಾರ್ಯಕ್ರಮದ ನೋಡಲ್ ಅಧಿಕಾರಿ ನಾವೂರು ಪ್ರೌಢಶಾಲಾ ಹಿಂದಿ ಶಿಕ್ಷಕಿ ಮೀನಾ ರವರು ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರವನ್ನು ವಿವರಿಸಿದರು.

ಈ ಕಾರ್ಯಕ್ರಮದಲ್ಲಿ ನಾವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಮಮತಾ ಸದಸ್ಯರುಗಳಾದ ಹರೀಶ್ ಸಾಲಿಯಾನ್, ಗಣೇಶ್ ಗೌಡ, ಹಸೈನಾರ್ ಎಸ್ ಡಿ ಎಂ ಸಿ ಸದಸ್ಯರುಗಳು, ಪೋಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ಸಹ ಶಿಕ್ಷಕಿ ಶೋಭಾ ಪಿ ಡಿ ರವರು ಧನ್ಯವಾದ ನೀಡಿದರು. ಶಿಕ್ಷಕಿ ಶುಭ ಎಂ ರವರು ನಿರೂಪಿಸಿದರು.

p>

LEAVE A REPLY

Please enter your comment!
Please enter your name here