ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಸಮಾರಂಭ ನವೆಂಬರ್ 2 ರಂದು ನಡೆಯಿತು.
ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಕೆ.ವಸಂತ ಬಂಗೇರ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಿಗೆ ಪ್ರಮುಖವಾಗಿದೆ.ಪ್ರತಿಯೊಬ್ಬ ವಿದ್ಯಾರ್ಥಿಗಳು ತನ್ನ ಜೀವನದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ತತ್ವವನ್ನು ಮತ್ತು ಸೇವೆಯನ್ನು ಪಾಲಿಸಬೇಕು ಎಂದರು.
ಉದ್ಘಾಟಕರಾಗಿ ಸಂತೋಷ್ ಪ್ರಭು ಎಂ, ಸಹಾಯಕ ಪ್ರಾಧ್ಯಾಪಕರು, ಸರಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆ ಇವರು ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವದ ಬಗ್ಗೆ ತಿಳಿಸಿದರು.ತನ್ನನ್ನು ತಾನು ರಾಷ್ಟ್ರೀಯ ಸೇವಾ ಯೋಜನೆಯ ಮುಖಾಂತರ ಹೇಗೆ ಜೀವನದಲ್ಲಿ ರೂಪಿಸಿಕೊಳ್ಳಬೇಕು ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಿಗೆ ಬಹಳ ಉತ್ತಮವಾಗಿ ಸ್ಪೂರ್ತಿಯನ್ನು ನೀಡಿದರು.
ಪ್ರಾಂಶುಪಾಲೆ ಡಾ.ಸವಿತಾ ಪ್ರಾಸ್ತವಿಕ ಮಾತುಗಳನ್ನಾಡಿದರು.
ಮುಖ್ಯ ಅತಿಥಿಯಾಗಿ ಸುಕೇಶ್ ಕುಮಾರ್, ಪ್ರಾಂಶುಪಾಲರು, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ, ಇವರು ಪ್ರತಿಜ್ಞಾವಿಧಿ ಭೋದಿಸಿದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕ, ನಾಯಕಿ ಹಾಗೂ ಸ್ವಯಂ ಸೇವಕರು ಪ್ರಮಾಣ ವಚನ ಸ್ವೀಕರಿಸಿದರು.ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕನಾದ ದುಂಡಿರಾಜ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕಿಯಾದ ಜ್ಯೋತಿ ಹಂಚಿಕೊಂಡರು.ಬಬಿತಾ ರೈ ಉದ್ಘಾಟಕರನ್ನು ಪರಿಚಯಿಸಿದರು, ಸತೀಶ್ ನಿರೂಪಿಸಿ, ಶಮೀಯುಲ್ಲಾ ಸ್ವಾಗತಿಸಿ, ಸೌಮ್ಯ ವಂದಿಸಿದರು.