ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ನ.04 ರಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ, ದ.ಕ ಜಿಲ್ಲಾ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಘ(ನಿ) ಮಂಗಳೂರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ನಡೆಯಿತು,
ಅಧ್ಯಕ್ಷತೆಯನ್ನು ಮಾಜಿ ಶಾಸಕ ವಸಂತ ಬಂಗೇರ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಯಾವುದನ್ನು ಬೇಕಾದರೂ ತಯಾರು ಮಾಡಬಹುದು ಆದರೆ ರಕ್ತವನ್ನು ತಯಾರು ಮಾಡಲು ಸಾಧ್ಯವಿಲ್ಲ ಎಂದರು.ರಕ್ತದಾನ ಶ್ರೇಷ್ಠದಾನ.ಅನೇಕ ಜೀವವನ್ನು ಬದುಕಿಸುವ ಪ್ರಾಮಾಣಿಕ ಪ್ರಯತ್ನ.ಆರೋಗ್ಯವಾದ ವ್ಯಕ್ತಿಯಿಂದ ಮಾತ್ರ ರಕ್ತದಾನ ಮಾಡಲು ಸಾಧ್ಯ.ರಕ್ತದಾನ ಮಾಡಬೇಕಾದರೆ ಯೋಗ್ಯತೆ ಬೇಕು ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಇದರ ಅಧ್ಯಕ್ಷ ಹರಿದಾಸ್ ಎಸ್.ಎಂ, ದ.ಕ ಜಿಲ್ಲಾ ವೈದ್ಯಕೀಯ ಶಿಕ್ಷಣದ ಮತ್ತು ಸಂಶೋಧನಾ ಸಹಕಾರಿ ಸಂಘ ನಿಯಮಿತ ಮಂಗಳೂರು ಇದರ ಅಧ್ಯಕ್ಷ ಶಿವಕುಮಾರ್ ಎಸ್ ಎಂ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕಾರ್ಯದರ್ಶಿ ಯಶವಂತ್ ಪಟ್ವರ್ಧನ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು, ಪ್ರಥಮ ದರ್ಜೆ ಕಾಲೇಜು ಪ್ರಾಂತಪಾಲರಾದ ಡಾ.ಸವಿತಾ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಸುಕೇಶ್ ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಬಿಎ ಶಮಿಉಲ್ಲಾ ಉಪಸ್ಥಿತರಿದ್ದರು.