ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲೋತ್ಸವ’ ಕಾರ್ಯಕ್ರಮ

0

ಬೆಳ್ತಂಗಡಿ: ಪ್ರತಿಯೊಂದು ಮಗುವಿನಲ್ಲಿ ಒಂದೊಂದು ಪ್ರತಿಭೆ ಇದ್ದೇ ಇರುತ್ತದೆ, ಸರಿಯಾದ ಅವಕಾಶ ಸಿಕ್ಕಾಗ ಅದು ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪಾ ನವೀನ್ ಹೇಳಿದರು.

ಅವರು ನ.4 ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾ ಭವನದಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ,ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಹಾಗೂ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ “ಕಲೋತ್ಸವ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸ್ಪರ್ಧೆಗಳಲ್ಲಿ ಸೋಲು ಗೆಲುವು ಸಾಮಾನ್ಯ. ಸೋತಾಗ ಕುಗ್ಗುವುದು ಗೆದ್ದಾಗ ಹಿಗ್ಗುವುದು ಬೇಡ. ಸೋಲು ಗೆಲುವು ಎರಡನ್ನು ಸಕಾರಾತ್ಮಕವಾಗಿ ಸ್ವೀಕರಿಸ ಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮುಖ್ಯ ಅತಿಥಿಗಳಾಗಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ತಾಲೂಕು ಪ್ರಭಾರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಮೋಹನ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯರಾದ ಸಂಗೀತಾ ಶೆಟ್ಟಿ ಮತ್ತು ಕಿಶೋರ್ ಶೆಟ್ಟಿ, ಬೆಳ್ತಂಗಡಿ ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಚೇತನಾಕ್ಷಿ ಎಂ, ಪ್ರೌಢಶಾಲಾ ವಿಭಾಗದ ಶಿಕ್ಷಣ ಸಂಯೋಜಕ ಸಿದ್ದಲಿಂಗ ಸ್ವಾಮಿ, ಪುಂಜಾಲಕಟ್ಟೆ ಸಿ.ಆರ್‌.ಪಿ ಚೇತನಾ, ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಂ|ಜೆರೊಮ್ ಡಿಸೋಜ, ಸೇಕ್ರೆಡ್ ಹಾರ್ಟ್ ಅನುದಾನಿತ ಪ್ರೌಢಶಾಲೆ ಮಡಂತ್ಯಾರು ಇಲ್ಲಿಯ ಮುಖ್ಯ ಶಿಕ್ಷಕ ಮೋಹನ್ ನಾಯಕ್, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ವಂ|ದೀಪಕ್ ಲಿಯೋ ಡೇಸಾ , ಗಾರ್ಡಿಯನ್ ಏಂಜಲ್ಸ್ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಹೆಲೆನ್ ಮೋನಿಕಾ ಲೋಬೊ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕಿಶೋರ್ ಕುಮಾರ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಮ್ಮದ್ ರಿಯಾಝ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ನಿರಂಜನ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ ತುಳುಪುಳೆ, ಟಿ.ಜಿ.ಟಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಪದವೀಧರ ಪ್ರಾಥಮಿಕ ಶಾಲಾ ಸಂಘದ ಅಧ್ಯಕ್ಷ ಯೋಗೇಶ್, ಚಿತ್ರಕಲಾ ಸಂಘದ ಅಧ್ಯಕ್ಷ ಥೋಮಸ್, ಎನ್ ಪಿಎಸ್ ಸಂಘದ ಅಧ್ಯಕ್ಷ ಸುರೇಶ್ ಮಾಚಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ ರಾಜೇಶ್, ಸರ್ಕಾರಿ ನೌಕರರ ಸಂಘದ ಗಂಗರಾಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಸಂಚಾಲಕ ವಂ|ಸ್ಟ್ಯಾನಿ ಗೋವಿಯಸ್ ಸಹಕರಿಸಿದರು. ಸೇಕ್ರೆಡ್ ಹಾರ್ಟ್ ಪ್ರೌಢಶಾಲಾ ಮುಖ್ಯ ಶಿಕ್ಷಕ ಮೋಹನ್ ನಾಯಕ್ ಸಂದೇಶ ವಾಚನಗೈದರು, ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ| ಜೆರೊಮ್ ಡಿಸೋಜ ವಂದಿಸಿದರು, ಉಪನ್ಯಾಸಕ ವಸಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

p>

LEAVE A REPLY

Please enter your comment!
Please enter your name here