ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

0

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನವೆಂಬರ್ 10 ಮತ್ತು 11ರಂದು ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ನಡೆಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನ ದೈಹಿಕ ನಿರ್ದೇಶಕ ಪ್ರಕಾಶ್ ಡಿಸೋಜ ರವರು ಶಾಲಾ ಧ್ವಜಾರೋಹಣಗೈದು ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ರಾಷ್ಟ್ರ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು ನುಡಿದು ಶುಭ ಹಾರೈಸಿದರು.

ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು.

ಶಾಲಾ ಸಂಚಾಲಕರಾದ ಅತೀ ವಂ.ಫಾ.ವಾಲ್ಟರ್ ಡಿಮೆಲ್ಲೋರವರು ವಿದ್ಯಾರ್ಥಿಗಳು ದೈಹಿಕವಾಗಿ ಸದೃಢರಾಗಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಂದು ನುಡಿದು ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ವಂ.ಫಾ.ಕ್ಲಿಫರ್ಡ್ ಪಿಂಟೋರವರು ಅತಿಥಿ ಪರಿಚಯ ಮಾಡಿದರು.

ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಸುಪ್ರಿಯಾ ಡಿಸೋಜ ಉಪಸ್ಥಿತರಿದ್ದರು.ವಿದ್ಯಾರ್ಥಿಗಳಿಗೆ ಓಟದ ಸ್ಪರ್ಧೆ, ಕಬಡ್ಡಿ, ಹಗ್ಗ ಜಗ್ಗಾಟ, ಗುಂಡೆಸೆತ, ಚಕ್ರ ಎಸೆತ, ಎತ್ತರ ಜಿಗಿತ, ಉದ್ದ ಜಿಗಿತ ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.

ವಿದ್ಯಾರ್ಥಿಗಳಾದ ಮೆಲ್ಸ್ಟನ್ ಡಿಸೋಜ ಸ್ವಾಗತಿಸಿ, ಲಹರಿ ವಂದಿಸಿದರು.ಲವಿಶಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಶರತ್ ಸಂತೋಷ್ ಪಿಂಟೋ ಕ್ರೀಡಾಕೂಟವನ್ನು ಆಯೋಜಿಸಿದರು.ಕ್ರೈಸ್ಟ್ ಅಕಾಡೆಮಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಮಂತ್ ಬಿ.ಸಿ ಸಹಕರಿಸಿದರು.

LEAVE A REPLY

Please enter your comment!
Please enter your name here