ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ

0

ಬೆಳ್ತಂಗಡಿ: ನ.15ರಂದು ಸಂತ ತೆರೇಸಾ ಸಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಆರತಿ ಬೆಳಗಿಸಿ ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು. ವಿದ್ಯಾರ್ಥಿಗಳು ಹಾಗೂ ಪ್ರಾಂಶುಪಾಲರು ಪಂಡಿತ್ ಜವಾಹರ್ ಲಾಲ್ ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.

ಕಾಲೇಜಿನ ಎಲ್ಲಾ ಉಪನ್ಯಾಸಕರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿ ವಿದ್ಯಾರ್ಥಿಗಳನ್ನು ಮನೋರಂಜಿಸಿದರು.ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡಲಾಯಿತು.ಉಪನ್ಯಾಸಕಿ ಅಕ್ಷತಾ ರವರು ಕಾರ್ಯಕ್ರಮವನ್ನು ನಿರೂಪಿಸಿದರು.ಎಲ್ಲಾ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here