ಮಡಂತ್ಯಾರು ಗ್ರಾ.ಪಂ ಗೆ ಪಂಚಾಯತ್ ರಾಜ್ ಆಯುಕ್ತರ ಭೇಟಿ

0

ಮಡಂತ್ಯಾರು: ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರವರು ನ.15 ರಂದು ಮಡಂತ್ಯಾರು ಗ್ರಾಮಪಂಚಾಯತ್ ಗೆ ಭೇಟಿ ನೀಡಿ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ, ಸೋಲಾರ್ ರೂಪ್ ಟಾಪ್ ಅಳವಡಿಕೆಯ ನೆಟ್ ಮೀಟರಿಂಗ್ ವ್ಯವಸ್ಥೆಯನ್ನು ವೀಕ್ಷಿಸಿ ಪಂಚಾಯತ್ ಕಾರ್ಯ ನಿರ್ವಹಣೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಈ ಸಂದರ್ಭ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ.ಬಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ಎ.ಎಸ್, ಉಪಾಧ್ಯಕ್ಷ ಗೋಪಾಲಕೃಷ್ಣ .ಕೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಾ|| ಪ್ರಕಾಶ್, MGNREGA ಪ್ರಭಾರ ತಾಲೂಕು ಸಹಾಯಕ ನಿರ್ದೇಶಕಿ ಸಫಾನ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಕಿಶೋರ್ ಕುಮಾರ್ ಶೆಟ್ಟಿ, ಶಶಿಪ್ರಭಾ, ಸಂಗೀತ ಶೆಟ್ಟಿ, ಪಂಚಾಯತ್ ಕಾರ್ಯದರ್ಶಿ ಮೋರ್ಲಿನ್ ಕ್ರಿಸ್ತಿನ್ ಡಿಸೋಜ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here