ಬೆಳ್ತಂಗಡಿ: ಸಾಂಸ್ಕೃತಿಕವಾದ ಅಭಿರುಚಿಗಳನ್ನು ಬೆಳೆಸಿಕೊಂಡಾಗ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುವುದು ಎಂದು ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಹೇಳಿದರು.
ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಕೇವಲ ಅಂಕಗಳನ್ನು ಗಳಿಸುವುದನ್ನು ಮಾತ್ರ ಉದ್ದೇಶವಾಗಿಟ್ಟುಕೊಳ್ಳದೆ ತಮ್ಮಲ್ಲಿರುವ ಪ್ರತಿಭೆಗಳನ್ನು ಬೆಳೆಸಿಕೊಳ್ಳಬೇಕು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಜೀವನದಲ್ಲಿ ನೆಮ್ಮದಿಯನ್ನು ಪಡೆಯಬಹುದು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು.ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಕಾಲೇಜಿನ ಉಪಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು.
ಕಾಲೇಜಿನ ಸಾಂಸ್ಕೃತಿಕ ಸಂಯೋಜಕರುಗಳಾದ ಮಹಾಬಲ ಗೌಡ ಸ್ವಾಗತಿಸಿದರು. ದೀಕ್ಷಾ ವಂದಿಸಿದರು, ಉಪನ್ಯಾಸಕ ಹರ್ಷಿತ್ ಕಾರ್ಯಕ್ರಮ ನಿರೂಪಿಸಿದರು.
p>