ದ.ಕ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಬಿ.ಸಿ.ರೋಡ್- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ನೆಲ್ಯಾಡಿ ಪೇಟೆಯಲ್ಲಿ ಜನ, ವಾಹನ ಸಂಚಾರ ಹೆಚ್ಚಾಗಿರುವುದರಿಂದ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಪ್ಲೈ ಓವರ್ ನಿರ್ಮಾಣ ಮಾಡಿಕೊಡುವಂತೆ ಸಂಬಂಧಪಟ್ಟವರಿಗೆ ತಿಳಿಸುವಂತೆ ಮನವಿ ಸಲ್ಲಿಸಲಾಯಿತು.
ಸ್ಪಂದನೆ: ಡಾ.ವೀರೇಂದ್ರ ಹೆಗ್ಗಡೆ ಅವರು ಈ ಬಗ್ಗೆ ಪ್ರತಿಕ್ರಿಯಿಸಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಗರಿ ಅವರಿಗೆ ಪತ್ರಮುಖೇನ ತಿಳಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಎ.ಕೆ ವರ್ಗೀಸ್, ಕಾರ್ಯದರ್ಶಿ ಪ್ರಶಾಂತ್ ಸಿ.ಎಚ್, ಜೊತೆ ಕಾರ್ಯದರ್ಶಿ ಉಷಾ ಅಂಚನ್, ಕೋಶಾಧಿಕಾರಿ ಸತೀಶ್ ಭಟ್, ಸಮಿತಿಯ ಸದಸ್ಯರಾದ ವಿ.ಜೆ ಜೋಸೆಫ್, ರಫೀಕ್ ಸೀಗಲ್, ಇಬ್ರಾಹಿಂ ಎಂ.ಕೆ ಜೊತೆಗಿದ್ದರು.
p>